ಕಲಬುರಗಿ:ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲೇ ವಕ್ತಿಯೋರ್ವ ಆತ್ಮಹತ್ಯೆಮಾಡಿಕೊಂಡಿರುವ ಬಗ್ಗೆ ವರದಿಯಾಗದೆ
ಶರಣನಗರದಲ್ಲಿರುವ ಡಾ.ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ವ್ಯಕ್ತಿ ಶವ ಇಂದು ಪತ್ತೆಯಾಗಿದೆ.
ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿ ದೇವಪ್ಪ(35) ಎಂದು ಗುರುತಿಸಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಬ್ರಹ್ಮಪುರ ಪೊಲೀಸರು ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.