ನವದೆಹಲಿ; ಮಣಿಪುರದ ಪರಿಸ್ಥಿತಿಯ ಜ್ವಲಂತ ಸಮಸ್ಯೆಯ ನಡುವೆ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸದರು ಲೋಕಸಭೆಯಲ್ಲಿ ಸೇರಿದಾಗ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಸತ್ತಿನಲ್ಲಿ ಸೋನಿಯಾ ಗಾಂಧಿಯವರ ಬಳಿಗೆ ತೆರಳಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಸೋನಿಯಾ ಗಾಂಧಿ ಅವರು ಚೆನ್ನಾಗಿದ್ದಾರೆ ಎಂದು ಹೇಳಿದ್ದಾರೆ.ಸೋನಿಯಾ – ರಾಹುಲ್ ಅವರ ವಿಮಾನದ ತುರ್ತು ಭೂಸ್ಪರ್ಶದ ಕುರಿತು ವಿಚಾರಿಸಿದ್ದಾರೆ ಎನ್ನಲಾಗಿದೆ.
ಇಬ್ಬರು ಕುಕಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತನ್ನ ವಾಗ್ದಾಳಿಯನ್ನು ತೀಕ್ಷ್ಣಗೊಳಿಸುತ್ತಿದ್ದಂತೆ ಇದೊಂದು ಸೌಜನ್ಯದ ಭೇಟಿ ನಡೆಯಿತು.
ಮಣಿಪುರ ಹಿಂಸಾಚಾರದ ವಿಷಯದ ಬಗ್ಗೆ ಮೌನ ಮುರಿಯಲು ಪ್ರತಿಪಕ್ಷಗಳ ಬೇಡಿಕೆಯ ನಡುವೆ, ಪ್ರಧಾನಿ ಮೋದಿ ಗುರುವಾರ ಇಬ್ಬರು ಕುಕಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವೀಡಿಯೊದ ಕುರಿತು ಪ್ರತಿಕ್ರಿಯಿಸಿದ್ದಾರೆ.ಆರೋಪಿಗಳ ವಿರುದ್ಧ ಕ್ರಮದ ಭರವಸೆ ನೀಡಿದ್ದಾರೆ.
ಅಧಿವೇಶನಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಗೆ ಎನ್‌ಡಿಎ ಸಭೆಯಲ್ಲಿ ಪಾಲ್ಗೊಳ್ಳಲು ಸಮಯವಿದೆ ಆದರೆ ಮಣಿಪುರಕ್ಕೆ ಹೋಗಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.