ಕಾಂಗ್ರೆಸ್ ಗೆಲುವಿನ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿ ಹೇಳಿದ್ದೇನು?

ಹೊಸದಿಲ್ಲಿ:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದು ಸರಕಾರ ರಚನೆಗೆ ಮುಂದಾಗಿದೆ. ಕಾಂಗ್ರೆಸ್ ನ ಈ ಅಭೂತಪೂರ್ವ ಗೆಲುವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಪ್ರಧಾನಿ ರಾಜ್ಯದಲ್ಲಿ ಚುನಾವಣೆ ಪ್ರಚಾರದ ವೇಳೆ ಅಂದಾಜು 20 ಬಾರಿ ರಾಜ್ಯಕ್ಕೆ ಬಂದು ಭರ್ಜರಿ ಚುನಾವಣೆ ಪ್ರಚಾರ ನಡೆಸಿದ್ದರು.ಆದರೆ ಫಲಿಸದೆ ಬಿಜೆಪಿ 65 ಕ್ಷೇತ್ರಗಳಿಗೆ ತೃಪ್ತಿ ಪಡೆದುಕೊಂಡಿದೆ.ರಾಜ್ಯ ಬಿಜೆಪಿ ತಮ್ಮ ಸೋಲನ್ನು ಒಪ್ಪಿಕೊಂಡಿದೆ.

ಇನ್ನು ಕಾಂಗ್ರೆಸ್ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು.ಕಾಂಗ್ರೆಸ್ ಜನರ ಆಶೋತ್ತರಗಳನ್ನು ಈಡೇರಿಸಲಿ, ಅವರಿಗೆ ನನ್ನ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಬಿಜೆಪಿಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿರುವ ಅವರು, ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುಮ್ಮಸ್ಸಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದು, ಬಿಜೆಪಿಯಿಂದ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಹೆಚ್ಚು ಸೀಟ್‌ ಗೆದ್ದಿರುವುದಕ್ಕೆ ಅವರಿಗೂ ಸಹ ಅಭಿನಂದೆಯನ್ನು ಸಲ್ಲಿಸಿದ್ದಾರೆ.

ಜನತೆಯ ಆಶೀರ್ವಾದವನ್ನು ನಾವು ಒಪ್ಪಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗೆ ಸಹಕಾರ ಕೊಡುತ್ತೇವೆ.ವಿರೋಧ ಪಕ್ಷವಾಗಿ ಜವಬ್ದಾರಿಯುತವಾಗಿ ನಾವು ಕೆಲಸವನ್ನು ಮಾಡುತ್ತೇವೆ. ನಮ್ಮ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಒಳ್ಳೆಯ ಕೆಲಸವನ್ನು ಮಾಡಿದೆ, ಹಾಗಿದ್ರೂ ಅನಿರೀಕ್ಷಿತವಾದ ಫಲಿತಾಂಶ ಬಂದಿದೆ. ಇದನ್ನು ನಾವು ಒಪ್ಪಿಕೊಳ್ಳುತ್ತೇವೆ. ಇಡೀ ಸೋಲಿನ ಜವಬ್ದಾರಿಯನ್ನು ನಾನು ರಾಜ್ಯಾಧ್ಯಕ್ಷನಾಗಿ ಹೊತ್ತುಕೊಳ್ಳುತ್ತೇನೆ ಎಂದು ನಳೀನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com