ಭೋಪಾಲ್: ತ್ರಿವಳಿ ತಲಾಖ್ ಅನ್ನು ಬೆಂಬಲಿಸುವವರು
ಮುಸ್ಲಿಂ ಹೆಣ್ಣು ಮಕ್ಕಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಾಗ್ಧಾಳಿ ನಡೆಸಿದ್ದಾರೆ.
ಭೋಪಾಲ್‌ನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಶ್ನೋತ್ತರ ವೇಳೆ ಮಾತನಾಡಿದ ಮೋದಿ, ಮುಸ್ಲಿಂ ಬಹುಸಂಖ್ಯಾತ ದೇಶಗಳು ತ್ರಿವಳಿ ತಲಾಖ್ ನ್ನು ನಿಷೇಧಿಸಿವೆ. ನಾನು ಈಜಿಪ್ಟ್‌ನಲ್ಲಿದ್ದೆ, ಅಲ್ಲಿ ಅವರು ಸುಮಾರು 80-90 ವರ್ಷಗಳ ಹಿಂದೆ ಅದನ್ನು ರದ್ದುಗೊಳಿಸಿದರು ಎಂದು ಹೇಳಿದ್ದಾರೆ.
ಏಕರೂಪ ನಾಗರಿಕ ಸಂಹಿತೆ (UCC) ಕುರಿತು ಮಾತನಾಡಿದ ಅವರು, ಯುಸಿಸಿ ಹೆಸರಿನಲ್ಲಿ ಜನರನ್ನು ಪ್ರಚೋದಿಸಲಾಗುತ್ತಿದೆ.
ಸಂವಿಧಾನವು ಸಮಾನ ಹಕ್ಕುಗಳ ಬಗ್ಗೆಯೂ ಮಾತನಾಡುತ್ತದೆ, ಸುಪ್ರೀಂಕೋರ್ಟ್ ಕೂಡಾ ಯುಸಿಸಿಯನ್ನು ಜಾರಿಗೆ ತರಲು ಕೇಳಿದೆ. ವಿರೋಧ ಪಕ್ಷದ ಜನರು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.