ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹರಿದು ಹಾಕಿದ ಕಾಂಗ್ರೆಸ್ ಶಾಸಕರಿಗೆ ದಂಡ ವಿಧಿಸಿದ ನ್ಯಾಯಾಲಯ; ದಂಡ ಪಾವತಿ ತಪ್ಪಿದ್ದಲ್ಲಿ ಜೈಲು ಶಿಕ್ಷೆ!

ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹರಿದು ಹಾಕಿದ ಕಾಂಗ್ರೆಸ್ ಶಾಸಕರಿಗೆ ದಂಡ ವಿಧಿಸಿದ ನ್ಯಾಯಾಲಯ

ಗುಜರಾತ್: ಕೃಷಿ ವಿಶ್ವವಿದ್ಯಾನಿಲಯದ ಉಪಕುಲಪತಿಗಳ ಕೊಠಡಿಗೆ ನುಗ್ಗಿ ವಿದ್ಯಾರ್ಥಿಗಳ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹರಿದು ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಅನಂತ್ ಪಟೇಲ್‌ಗೆ ಗುಜರಾತ್‌ನ ನವಸಾರಿ ನ್ಯಾಯಾಲಯ 99 ರೂಪಾಯಿ ದಂಡ ವಿಧಿಸಿದೆ.

ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ವಿಎ ಧಧಲ್ ಅವರ ನ್ಯಾಯಾಲಯವು ವಂಸ್ಡಾ ಶಾಸಕರಾದ ಪಟೇಲ್ ಅವರನ್ನು ಕ್ರಿಮಿನಲ್ ಅತಿಕ್ರಮಣಕ್ಕಾಗಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 447 ರ ಅಡಿಯಲ್ಲಿ ತಪ್ಪಿತಸ್ಥರೆಂದು ಘೋಷಿಸಿತು.

ಯೂತ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ಪಟೇಲ್ ಮತ್ತು ಇತರ ಆರು ಮಂದಿ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 353 (ಹಲ್ಲೆ), 427 (50 ರೂ. ಮೇಲ್ಪಟ್ಟು ನಷ್ಟ ಉಂಟು ಮಾಡಿದ ಕಿಡಿಗೇಡಿತನ), 447 (ಅಪರಾಧ ಅತಿಕ್ರಮಣ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಕ್ರಿಮಿನಲ್ ಪ್ರಕರಣಕ್ಕಾಗಿ ಮೂವರು ಆರೋಪಿಗಳನ್ನು ತಪ್ಪಿತಸ್ಥರೆಂದು ನ್ಯಾಯಾಲಯವು ಘೋಷಿಸಿದೆ. 99 ರೂ. ದಂಡವನ್ನುಪಾವತಿ ಮಾಡಲು ಆದೇಶಿಸಿದೆ. ತಪ್ಪಿದಲ್ಲಿ ಅವರು ಏಳು ದಿನಗಳ ಸಾದಾ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ