ಮೋದಿ ರೋಡ್ ಶೋ ಮಾಡಿದ್ದ ರಸ್ತೆಗೆ ಗೋ ಮೂತ್ರ & ಸಗಣಿ ನೀರು ಹಾಕಿ ಸ್ವಚ್ಛಗೊಳಿಸಿದ ಸಿದ್ದರಾಮಯ್ಯ ಅಭಿಮಾನಿಗಳು
ಮೈಸೂರು;ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಬಳಿಕ ಪ್ರಧಾನಿ ಮೋದಿ ರೋಡ್ ಶೋ ಮಾಡಿದ್ದ ರಸ್ತೆಗೆ ಸಿದ್ದರಾಮಯ್ಯ ಅಭಿಮಾನಿಗಳು ಮೈಸೂರಲ್ಲಿ ಗೋ ಮೂತ್ರ & ಸಗಣಿ ನೀರು ಹಾಕಿ ಸ್ವಚ್ಛಗೊಳಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿ ಕಂಸಾಳೆ ರವಿ ಗೋಮೂತ್ರ ಹಾಗೂ ಸಗಣಿ ನೀರನ್ನು ಹಾಕಿ ಪ್ರಧಾನಿ ಮೋದಿ ರೋಡ್ ಶೋ ನಡೆಸಿದ್ದ ಮೈಸೂರಿನ ರಸ್ತೆಯನ್ನ ಸ್ವಚ್ಛಗೊಳಿಸಿದ್ದಾರೆ.
ಪಿಎಂ ರೋಡ್ ಶೋ ಮಾಡಿದ್ದ ಮೈಸೂರಿನ ಸಯ್ಯಾಜಿ ರಸ್ತೆಗೆ ಕಾಂಗ್ರೆಸ್ ಕಾರ್ಯಕರ್ತರು ಸಗಣಿ ಮತ್ತು ಗೋ ಮೂತ್ರ ಹಾಗೂ ನೀರು ಹಾಕಿ ಸ್ವಚ್ಛ ಮಾಡಿದ್ದಾರೆ.ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಮೈಸೂರಿನ ರಾಜಮಾರ್ಗದಲ್ಲಿ ಮೋದಿ ಭರ್ಜರಿ ರೋಡ್ ಶೋ ನಡೆಸಿದ್ದರು.ಇದೇ ರಸ್ತೆಯಲ್ಲಿ ಈಗ ಮೈಸೂರು ಕಾಂಗ್ರೆಸ್ ಮುಖಂಡರು ಸಗಣಿ ನೀರು ಹಾಕಿ ಸ್ವಚ್ಛಗೊಳಿಸಿ ಬಿಜೆಪಿಯನ್ನು ಈ ಮೂಲಕ ವ್ಯಂಗ್ಯ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಸ್ಥಳೀಯ ಕಾಂಗ್ರೆಸ್ ಮುಖಂಡ ಕಂಸಾಳೆ ರವಿ,ಚುನಾವಣೆಯ ಮೊದಲು ಮೈಸೂರಿನ ರಾಜ ಮಾರ್ಗದಲ್ಲಿ ಮೋದಿ ಭರ್ಜರಿ ರೋಡ್ ಶೋ ನಡೆಸಿದ್ದರು. ಅಂಬಾರಿ ಹಾದು ಹೋಗುವ ರಾಜ ಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದೆ ದೊಡ್ಡ ತಪ್ಪು ಎಂದು ಹೇಳಿದ್ದಾರೆ.
ಇದು ರಾಜ ಮನೆತನಕ್ಕೆ ಮಾಡಿದ ಅಪಮಾನ.ಅಂಬಾರಿ ಬಿಟ್ಟರೆ ಇನ್ಯಾವುದೇ ದೊಡ್ಡ ಮೆರವಣಿಗೆ ಇಲ್ಲಿ ಮಾಡಿರಲಿಲ್ಲ. ಆದರೆ ಹಿಂದುತ್ವದ ಹೆಸರೇಳುವ ಬಿಜೆಪಿಯವರು ನಾಡಹಬ್ಬಕ್ಕೆ ಅಪಮಾನ ಆಗುವ ರೀತಿ ರೋಡ್ ಶೋ ಮಾಡಿದ್ದಾರೆ.
ಈ ರಸ್ತೆಗೆ ಆಗಿರುವ ಕೊಳೆಯನ್ನು ತೊಳೆಯಲು ಸಗಣಿ ನೀರು ಹಾಕಿ ಸ್ವಚ್ಛ ಮಾಡುತ್ತಿದ್ದೇವೆ ಎಂದು ರವಿ ಹೇಳಿದರು.