ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಅವರ ರೋಡ್‌ಶೋಗಾಗಿ ರಾಜ್ಯ ಸರ್ಕಾರವು 52 ಲಕ್ಷ ರೂಪಾಯಿ ವೆಚ್ಚ ಮಾಡಿ ಬ್ಯಾರಿಕೇಡ್‌ಗಳನ್ನು ಹಾಕಿದೆ ಎಂದು ರಾಜ್ಯ ಹಣಕಾಸು ಇಲಾಖೆಯ ದಾಖಲೆ ತಿಳಿಸಿರುವ ಬಗ್ಗೆ ವರದಿಯಾಗಿದೆ.
ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಲು ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಭೇಟಿ ನೀಡಿದ್ದರು.ಈ ವೇಳೆ ರೈಲ್ವೆ ಮೈದಾನಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ 7 ಕಿಮೀ ರೋಡ್‌ಶೋವನ್ನು ಮೋದಿ ನಡೆಸಿದ್ದರು.
ರೋಡ್‌ಶೋ ಗೆ ಏಳು ಕಿಮೀ ಮಾರ್ಗದುದ್ದಕ್ಕೂ ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು.ಸುಮಾರು 2,500 ಪೊಲೀಸರನ್ನು ನಿಯೋಜಿಸಲಾಗಿತ್ತು.