ಉಳ್ಳಾಲ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

-ಮೊಹಮ್ಮದ್‌ ನೂಹ್ಮನ್‌ ಆತ್ಮಹತ್ಯೆ ಮಾಡಿಕೊಂಡ ಯುವಕ

ಉಳ್ಳಾಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ನಡೆದಿದೆ.

ರಶೀದಾ ಭಾನು ಎಂಬವರ ಪುತ್ರ ಮೊಹಮ್ಮದ್‌ ನೂಹ್ಮನ್‌ (19) ಆತ್ಮಹತ್ಯೆಗೈದ ಯುವಕ.

ನೂಹ್ಮನ್‌ ಮನೆಯ ಒಳಗಡೆ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ಮೃತ ಯುವಕ ಐವರು ಸಹೋದರಿಯರಿಗೆ ಓರ್ವನೇ ಸಹೋದರನಾಗಿದ್ದ.ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್