ಮಂಗಳೂರು; ಮೊಯ್ದೀನ್ ಬಾವಾ ಬೆಂಬಲಿಗರಿಂದ ಹಲ್ಲೆ ಆರೋಪ, ಇನ್ನೊಂದೆಡೆ ಮೊಯ್ದೀನ್ ಬಾವ ಮೇಲೆಯೇ ಹಲ್ಲೆ ಆರೋಪ, ದೂರು- ಪ್ರತಿ ದೂರು ದಾಖಲು

ಮಂಗಳೂರು;ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರಿಗೆ ಹಲ್ಲೆ ನಡೆಸಿರುವ ಆರೋಪ ಒಂದೆಡೆಯಾದರೆ ಇನ್ನೊಂದು ಕಡೆ ಮೊಯ್ದೀನ್ ಬಾವಾ ಅವರು ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು-ಪ್ರತಿ ದೂರು ದಾಖಲಾಗಿದೆ.

ನಿಝಾಮ್ ಹಾಗೂ ಹಾಶೀರ್ ನಗರದ ಒಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮೊಯ್ದಿನ್ ಬಾವಾ ಬೆಂಬಲಿಗರ ತಂಡ ಕಾಂಗ್ರೆಸ್ ಕಾರ್ಯಕರ್ತರಾದ ನಿಝಾಮ್ ಗುರುಪುರ ಮತ್ತು ಹಾಶೀರ್ ಕೈಕಂಬ ಎಂಬವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಈ ಹಿಂದೆ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಕಾರು ಚಾಲಕನಾಗಿದ್ದ ನಿಝಾಮ್, ಇತ್ತೀಚೆಗಷ್ಟೇ ಕಾಂಗ್ರೆಸ್ ಗೆ ತೆರಳಿದ್ದರು.

ಇನ್ನು ಮೊಯ್ದಿನ್ ಬಾವಾ ಅವರಿಗೆ ನಿಝಾಮ್ ಮತ್ತು ಸಂಗಡಿಗರು ಹಲ್ಲೆ ನಡೆಸಿರುವ ಆರೋಪ ಮಾಡಿದ್ದು ಸಂಬಂಧಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ.

ಸದ್ಯ ಮೊಯ್ದಿನ್ ಬಾವಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂ‍ದು ಹೇಳಲಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com