ಮೂಡಬಿದ್ರೆ: ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮೂಡಬಿದ್ರೆ: ಹಾಸ್ಟೆಲ್ ನ ಬಾತ್ರೂಂನಲ್ಲಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದ್ರೆಯ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ.

ಗದಗ ಜಿಲ್ಲೆಯ ಮುಂಡರಗಿ ತರ್ಚಿಹಾಳದ ಮನೋಜ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಈತ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ವಿಷಯ ತಿಳಿದ ಪೋಷಕರು ತಾವು ಬರುವವರೆಗೂ ಶವ ಹೊರ ತಗೆಯದಂತೆ ಪಟ್ಟು ಹಿಡಿಡಿದ್ದಾರೆ. ಸದ್ಯ ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ತನಿಖೆಗೆ ಬೇಡಿಕೆ ಇಟ್ಟಿದ್ದಾರೆ.ಈ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್