ಬೆಳ್ತಂಗಡಿ; ಮದ್ರಸಾ ಶಿಕ್ಷಕನಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಳ್ತಂಗಡಿ;ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪಿ ಮದ್ರಸಾ ಶಿಕ್ಷಕನಿಗೆ
ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಮೂಡಿಗೆರೆ ಮೂಲದ ಮದ್ರಸಾ ಶಿಕ್ಷಕ ಸೈಫುಲ್ಲಾಗೆ ಶಿಕ್ಷೆ ವಿಧಿಸಲಾಗಿದೆ.

ಆರೋಪಿ ಧರ್ಮಸ್ಥಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಲ್ಲಿ ಪ್ರಯಾಣದ ವೇಳೆ ಉಪ್ಪಿನಂಗಡಿ ಸಮೀಪದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಹೊರಿಸಲಾಗಿತ್ತು.

ಈ ಕುರಿತು ಆರೋಪಿ ಮುಹಮ್ಮದ್‌ ಸೈಫುಲ್ಲಾ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದ್ದು,ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ ಸೈಪುಲ್ಲಾ ಅಪರಾಧಿ ಎಂದು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ