ಮಂಗಳೂರು; ಮಾದಕ ವಸ್ತು ಮಾರಾಟಕ್ಕೆ ಯತ್ನ, ಇಬ್ಬರ ಬಂಧನ

ಮಂಗಳೂರು;ಮೂಡುಶೆಡ್ಡೆಯ ಬಳಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಪಿಲಿಕುಳ ಸಮೀಪದ ನಿವಾಸಿ ಶಾರೂಕ್ (27) ಮತ್ತು ತೋಕೂರಿನ ಜಗದೀಶ್ (45) ಬಂಧಿತರು ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕ ಆಯುಧಗಳು, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಲಾಗಿದೆ. ಇದರ ಮೌಲ್ಯ 4,41,700 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಗಳು ಮೂಡುಶೆಡ್ಡೆಗೆ ಹೋಗುವ ದಾರಿಯಲ್ಲಿ ನಿಂತು ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಾವೂರು ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್