ಮೂಡುಶೆಡ್ಡೆ ಘರ್ಷಣೆ ಪ್ರಕರಣ, ನಾಲ್ವರ ಬಂಧನ

ಮಂಗಳೂರು:ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ.

ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತರು.ಬಂಧಿತರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಘಟನೆಗೆ ಸಂಬಂಧಿಸಿ ಐದು ಎಫ್ ಐ ಆರ್ ದಾಖಲಾಗಿದೆ.
ಇತರ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.ಹೆಚ್ಚಿನ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

ಬುಧವಾರ ರಾತ್ರಿ ವೇಳೆ ಮೂಡುಬಿದಿರೆ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಮೂಡುಶೆಡ್ಡೆಯ ಮತಗಟ್ಟೆಯ ಬಳಿ ತೆರಳಿ ಕಾರ್ಯಕರ್ತರ ಬಳಿ ಮಾತನಾಡುತ್ತಿದ್ದರು ಎನ್ನಲಾಗಿದೆ.

ಈ ವೇಳೆ ಬಿಜೆಪಿಗರು ‘ಮೋದಿ ಮೋದಿ’ ಎಂದು ಘೋಷಣೆ ಕೂಗಿದಾಗ, ಮಿಥುನ್ ರೈ ಮತ್ತವರ ಬೆಂಬಲಿಗರು ‘ಕಾಂಗ್ರೆಸ್‌ಗೆ ಜೈ’ ಘೋಷಣೆ ಕೂಗಿದ್ದಾರೆ. ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಹೊಡೆದಾಟ ಸಂಭವಿಸಿದೆ ಎನ್ನಲಾಗಿದೆ.

ಘಟನೆ ಬಳಿಕ ಕಾವೂರು ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.ಹೊರಗಿನ ವ್ಯಕ್ತಿಗಳಿಗೆ ಮೂಡುಶೆಡ್ಡೆ ವ್ಯಾಪ್ತಿಯೊಳಗೆ ಅವಕಾಶ ನಿರಾಕರಿಸಲಾಗಿತ್ತು.ಪೊಲೀಸರು ಸ್ಥಳದಲ್ಲಿ ಕಣ್ಗಾವಲಿಟ್ಟು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com