ಮೊರೊಕ್ಕೊ ನಗರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ 7.2ರಷ್ಟು ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 1,037 ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ ಎಂದು ಮೊರೊಕ್ಕೊ ಸಚಿವಾಲಯ ಶನಿವಾರ ತಿಳಿಸಿದೆ.
ದಕ್ಷಿಣ ಮಾರುಕೇಶ್‌ನಿಂದ 70 ಕಿ.ಮೀ ದೂರದಲ್ಲಿರುವ ಐಘಿಲ್ ನಗರದಲ್ಲಿ ಭೂಕಂಪನ ಕೇಂದ್ರ ಬಿಂದುವಾಗಿದೆ.
ಸೆಪ್ಟೆಂಬರ್ 8ರ ತಡರಾತ್ರಿ 11 ಘಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ.
ಅಲ್-ಹೌಜ್, ಮರ್ರಾಕೇಶ್, ಔರ್ಜಾಜೆಟ್, ಅಜಿಲಾಲ್, ಚಿಚೌವಾ ಮತ್ತು ತಾರೌಡಾಂಟ್ ಪ್ರಾಂತ್ಯಗಳಲ್ಲಿ ಸಾವುನೋವುಗಳು ವರದಿಯಾಗಿವೆ ಎಂದು ಮೊರಾಕ್ಕೋದ ಆಂತರಿಕ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಇದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ನೀಡಲಾಗುತ್ತಿದೆ.
ಭೂಕಂಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿ ಸಂತಾಪ ಸೂಚಿಸಿದ್ದಾರೆ.