BIG NEWS ಮಸೀದಿಯೊಂದರಲ್ಲಿ ಇಫ್ತಾರ್ ಸೇವಿಸಿದ 100ಕ್ಕೂ ಅಧಿಕ ಮಂದಿ ಅಸ್ವಸ್ಥ, ಕೆಲವರ ಸ್ಥಿತಿ‌ ಗಂಭೀರ

ಮಸೀದಿಯೊಂದರಲ್ಲಿ ಇಫ್ತಾರ್ ಸೇವಿಸಿದ 100ಕ್ಕೂ ಅಧಿಕ ಮಂದಿ ಅಸ್ವಸ್ಥ, ಕೆಲವರ ಸ್ಥಿತಿ‌ ಗಂಭೀರ

ಪ.ಬಂಗಾಳ;ಮಸೀದಿಯೊಂದರಲ್ಲಿ ರಂಜಾನ್ ನ ಇಫ್ತಾರ್ ಆಹಾರ ಸೇವಿಸಿದ 100ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ‌

ಪಶ್ಚಿಮ ಬಂಗಾಳದ ದಕ್ಷಿಣ ಭಾಗದಲ್ಲಿ ಪಖಿರಾಲಯ ಸಮೀಪದ ಮಸೀದಿಯಲ್ಲಿ ಇಫ್ತಾರ್ ಸೇವಿಸಿದ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾದರು.ಕೋಲ್ಕತ್ತಾದ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಅವರನ್ನು ದಾಖಲಿಸಲಾಗಿದೆ. ದಾಖಲಾಗಿರುವ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಕುಲ್ತಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಖಿರಾಲಯ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಈ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಲ್ಲಿ ಒಬ್ಬರು ಇದು ಆಹಾರ ವಿಷವಾಗಿ ಜನರು ಅಸ್ವಸ್ಥರಾಗಿದ್ದಾರೆ ಎಂದು ಹೇಳಿದ್ದಾರೆ‌.

ರಂಝಾನ್ ಹಿನ್ನೆಲೆ ಸ್ಥಳೀಯ ನಿವಾಸಿಗಳು ನೂರಾರು ಮಂದಿ ಉಪವಾಸ ವೃಥ ಬಿಡಲು ಮಸೀದಿಗೆ ತೆರಳಿದ್ದರು ಎನ್ನಲಾಗಿದೆ. ಅಲ್ಲಿ ಸೇವಿಸಿದ ಯಾವುದೋ ಒಂದು ಆಹಾರ ವಿಷವಾಗಿ ಪರಿಣಮಿಸಿ ಅನಾಹುತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ