ಸಂಸದೆ ಮಹುವಾ ಮೊಯಿತ್ರಾ ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂದ ಬಿಜೆಪಿ ಸಂಸದ

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಣ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದಾರೆ.

ಈ ಕುರಿತು ಲೋಕಸಭೆ ಸ್ಪೀಕರ್ ಗೆ ಪತ್ರ ಬರೆದಿರುವ ನಿಶಿಕಾಂತ್ ದುಬೆ, ಮಹುವಾ ವಿರುದ್ಧ ತನಿಖೆ ನಡೆಸುವಂತೆ
ಆಗ್ರಹಿಸಿದ್ದಾರೆ.

ಡಿಸೆಂಬರ್ 12, 2015ರಂದು ಉದ್ಯಮಿ ಹೀರಾನಂದನಿ ಹಿತಾಸಕ್ತಿಯನ್ನು ಕಾಪಾಡಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಣ ಪಡೆದು ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಾರೆ ಎಂದು ದುಬೆ ಆರೋಪ ಮಾಡಿದ್ದಾರೆ.

ಸಂಸತ್ತಿನಲ್ಲಿ ಸಂಸದೆ ಮಹುವಾ ಮೊಯಿತ್ರಾ ಕೇಳಿರುವ 65 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳು ಹೀರಾನಂದನಿ ಅವರ ವ್ಯವಹಾರಿಕ ಹಿತಾಸಕ್ತಿಯನ್ನು ಕಾಪಾಡಲು ಕೇಳಲಾಗಿದೆ ಎಂದು ಅವರು ದೂರಿದ್ದಾರೆ.

ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸಂಸದ ಸ್ಥಾನದಿಂದ ಅಮಾನತುಗೊಳಿಸಿ ಎಂದು ಕೂಡ ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು