ಸಂಸದ ರಮೇಶ ಜಿಗಜಿಣಗಿ ಅವರ ಮಾಜಿ ಕಾರು ಚಾಲಕನ ಬರ್ಬರ ಕೊಲೆ

ವಿಜಯಪುರ: ಸಂಸದ ರಮೇಶ ಜಿಗಜಿಣಗಿ ಅವರ ಮಾಜಿ ಕಾರು ಚಾಲಕನನ್ನು ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ವಿಜಯಪುರ ನಗರದ ಅಲಕುಂಟೆ ‌ನಗರದಲ್ಲಿ ಮಲ್ಲಿಕಾರ್ಜುನ ದೊಡ್ಡಮನಿ (43) ಕೊಲೆಯಾಗಿದೆ.

ಮಲ್ಲಿಕಾರ್ಜುನ ಅವರು ಬೆಳಿಗ್ಗೆ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಆದರ್ಶನಗರ‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಎಎಸ್ಪಿ ಶಂಕರ ಮಾರಿಹಾಳ, ಆದರ್ಶನಗರ ಪಿಎಸೈ ಯತೀಶ್ ಹಾಗೂ ಶ್ವಾನದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಟೋ ಚಾಲಕನಾಗಿದ್ದ ಮಲ್ಲಿಕಾರ್ಜುನ ಈ ಹಿಂದೆ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಕಳೆದ ಮೂರು ವರ್ಷದ ಹಿಂದೆ ಕಾರಣಾಂತರಗಳಿಂದ ಕೆಲಸ ಬಿಟ್ಟಿದ್ದರು. ಆ ಬಳಿಕ ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದರು.

ಟಾಪ್ ನ್ಯೂಸ್