ಸಮ್ಮಿಶ್ರ ಸರಕಾರ ಪತನ ವಿಚಾರ; ಸಿದ್ದರಾಮಯ್ಯ ವಿರುದ್ಧ ಡಾ.ಸುಧಾಕರ್ ಆರೋಪಕ್ಕೆ ತಿರುಗೇಟು ಕೊಟ್ಟ ಮಾಜಿ ಸಚಿವ ಎಂಟಿಬಿ ನಾಗರಾಜ್.

ಬೆಂಗಳೂರು;ಸಮ್ಮಿಶ್ರ ಸರಕಾರದ ಪತನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪರೋಕ್ಷ ಕಾರಣ ಎಂದು ಆರೋಪಿಸಿ ಟ್ವೀಟ್ ಮಾಡಿರುವ ಮಾಜಿ ಸಚಿವ ಡಾ. ಸುಧಾಕರ್ ಗೆ ಬಿಜೆಪಿ ನಾಯಕ, ಮಾಜಿ ಸಚಿವ ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ.

ಮಾನ್ಯ ಸಿದ್ದರಾಮಯ್ಯ ರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ.
ಆದರೆ ಸುಧಾಕರ್ ಹೇಳಿದ ರೀತಿ ಪ್ರೇರಣೆ ಎನ್ನುವುದು ಸುಳ್ಳು.ಸುಧಾಕರ್ ತನ್ನ ಹೇಳಿಕೆಯನ್ನು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ ? ಇಷ್ಟು ದಿನ ಮೌನವಾಗಿದ್ದು ಏಕೆ? ಎಂದು ಎಂಟಿಬಿ ಪ್ರಶ್ನಿಸಿದ್ದಾರೆ.

ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು?ಎಂದು ಪ್ರಶ್ನಿಸಿದ್ದಾರೆ.

ಸುಧಾಕರ್ ಬೆಳಿಗ್ಗೆ ಟ್ವೀಟ್ ಮಾಡಿ, 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಅವರು ಅಸಹಾಯಕತೆ ತೋರಿಸುತ್ತಿದ್ದರು.ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದು ಸುಧಾಕರ್ ಹೇಳಿದ್ದಾರೆ.

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನು, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು ಎಂದು ಹೇಳಿದ್ದಾರೆ.

ಸಮ್ಮಿಶ್ರ ಸರಕಾರದ ಪತನದ ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಸುಧಾಕರ್ ಕೇಳಿದ್ದರು.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com