ಮೂಡುಬಿದಿರೆ; ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ, ಕ್ಷುಲ್ಲಕ‌ ಕಾರಣಕ್ಕೆ ದುಡುಕಿದ ವಿದ್ಯಾರ್ಥಿ?

ಮೂಡುಬಿದಿರೆ:ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ನಡೆದಿದೆ.

ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸಾತ್ವಿಕ್(21) ಆತ್ಮಹತ್ಯೆ ಮಾಡಿಕೊಂಡವರು.

ಭಾನುವಾರ ಬೆಳಗ್ಗೆ ಸಾತ್ವಿಕ್‌ನನ್ನು ಆತನ ತಾಯಿ ಎಬ್ಬಿಸುವಾಗ ಕೋಪಗೊಂಡಿದ್ದು, ಕೆಲವು ನಿಮಿಷಗಳ ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮಗನನ್ನು ಎಬ್ಬಿಸಿ, ಪರೀಕ್ಷೆ ಹತ್ತಿರ ಬಂದಿದೆ, ಬೇಗ ಎದ್ದು ಓದು ಎಂದು ಬುದ್ದಿವಾದ ಹೇಳಿದರೆನ್ನಲಾಗಿದೆ.ಇಷ್ಟಕ್ಕೆ ಕೋಪಗೊಂಡ ಸಾತ್ವಿಕ್‌ ಕೋಣೆಯ ಬಾಗಿಲು ಮುಚ್ಚಿ ಶಾಲನ್ನು ಫ್ಯಾನಿಗೆ ಕಟ್ಟಿ ಆತ್ಮಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಕುರಿತು
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.ಕ್ಷುಲ್ಲಕ ಕಾರಣಕ್ಕೆ ಪ್ರತಿಭಾವಂತ ಯುವಕ ಆತ್ಮಹತ್ಯೆ ಮಾಡಿಕೊಂಡರೇ ಅಥವಾ ಬೇರೆ ಏನಾದರೂ ಕಾರಣ ಇದೆಯಾ ಎನ್ನುವುದು ತಿಳಿದು ಬರಬೇಕಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ