ಮೂಡಿಗೆರೆಯಲ್ಲಿ ಬಿಜೆಪಿ ಶಾಸಕನ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದಲೇ ಪ್ರತಿಭಟನೆ, ಕಣ್ಣೀರು ಹಾಕಿ ಶಾಸಕ ಎಂಪಿ ಕುಮಾರಸ್ವಾಮಿ ಹೇಳಿದ್ದೇನು?

ಚಿಕ್ಕಮಗಳೂರು:ಮೂಡಿಗೆರೆ ಕ್ಷೇತ್ರದಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದಕ್ಕೆ ಶಾಸಕ ಎಂಪಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.

ಬೀದಿ ಕಾರ್ಯಕರ್ತರ ಪ್ರತಿಭಟನೆ ಕಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಅವರು ವಿಜಯ ಸಂಕಲ್ಪ ರಥ ಯಾತ್ರೆಯನ್ನು ರದ್ದುಪಡಿಸಿ ತೆರಳಿದ್ದರು.ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಎಂ.ಪಿ. ಕುಮಾರಸ್ವಾಮಿ, ನಾನು ದಲಿತ ಎಂಬ ಕಾರಣಕ್ಕೆ ಕಾರ್ಯಕರ್ತರು ಹೀಗೆಲ್ಲ ಪಿತೂರಿ, ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬೇರೆ ಸಮುದಾಯದ ಶಾಸಕರಾಗಿದ್ದರೆ ಹೀಗೆ ಮಾಡುತ್ತಿದ್ದರೇ ಎಂದು ಎಂಪಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.

ಮೂಡಿಗೆರೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ನಡೆದಿದೆ. ಕೆಲವರು ಬೇಕು ಎಂದು ಹೀಗೆ ಮಾಡಿದ್ದಾರೆ.ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ಈ ಗಲಾಟೆ ಹಿನ್ನೆಲೆಯಲ್ಲಿ 100 ಮೀಟರ್ ದೂರಕ್ಕೆ ನನ್ನನ್ನು ಕರೆದೊಕೊಂಡು ಹೋಗಿ ಸಮಾಧಾನ ಹೇಳಿದ್ದಾರೆ.ಮೂಡಿಗೆರೆಗೆ ನೀನೇ ಅಭ್ಯರ್ಥಿ, ಗೆಲ್ಲೋದು ನೀನೆ ಎಂದು ಅಭಯ ನೀಡಿದ್ದಾರೆ ಎಂದು ಎಂಪಿ ಕುಮಾರಸ್ವಾಮಿ ಹೇಳಿದರು.

ಟಾಪ್ ನ್ಯೂಸ್