ಮುಲ್ಕಿ; ಬೈಕ್ ಗೆ ಕಾರು ಢಿಕ್ಕಿಯಾಗಿ ಯುವತಿ ಮೃತ್ಯು

ಮುಲ್ಕಿ: ಬೈಕ್ ಗೆ ಕಾರು ಢಿಕ್ಕಿಯಾಗಿ ಬೈಕ್ ಸಹಸವಾರೆ ಯುವತಿ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮುಲ್ಕಿ ಜಂಕ್ಷನ್ ಬಳಿ ನಡೆದಿದೆ.

ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಮೃತ ಯುವತಿ.ಗಾಯಾಳು ಬೈಕ್ ಸವಾರನನ್ನು ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ (21)ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬೈಕ್ ನ್ನು ಕಾರು ದೂಡಿಕೊಂಡು ಹೋಗಿದ್ದು, ಬೈಕ್ ಹಿಂಭಾಗದಲ್ಲಿ ಕುಳಿತುಕೊಂಡಿದ್ದ ಸಹಸವಾರೆ ಪ್ರೀತಿಕಾ ಶೆಟ್ಟಿ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ.

ಈ ಕುರಿತು ಸುರತ್ಕಲ್ ಉತ್ತರ ಟ್ರಾಫಿಕ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಟಾಪ್ ನ್ಯೂಸ್