ಮೂಲ್ಕಿ;ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯದ ವಾರಂಟ್ ಆದೇಶದಂತೆ ಪೊಲೀಸರು ಬಂಧಿಸಲು ಹೋದಾಗ ಆರೋಪಿ ಕೀಟನಾಶಕ ಸೇವಿಸಿ ಅಸ್ವಸ್ಥನಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನಡೆದಿದೆ.
ಬಜಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ 2017 ರಲ್ಲಿ ನಡೆದ ಅಪರಾಧ ಪ್ರಕರಣವೊಂದರ ಆರೋಪಿಯಾಗಿದ್ದ ಕರುಣಾಕರ ಶೆಟ್ಟಿ (44) ಎಂಬವರ ವಿರುದ್ದ ವಾರಂಟ್ ನೀಡಲಾಗಿತ್ತು.
ಕರುಣಾಕರ ಶೆಟ್ಟಿ ಉಡುಪಿಯಲ್ಲಿರುವ ಬಾರೊಂದರಲ್ಲಿ ಕೆಲಸ ಮಾಡುತ್ತಿದ್ದ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಬಜಪೆ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಗುರುಪ್ಪ ಕಾಂತಿ ಮತ್ತು ಸಿಬ್ಬಂದಿಗಳು ಆರೋಪಿಯನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ಆತ ಕೆಲಸ ಮಾಡಿಕೊಂಡಿರುವ ಬಾರ್ ಗೆ ಬಂದಿದ್ದರು.
ಪೊಲೀಸರು ವಶಕ್ಕೆ ಪಡೆಯುವ ಸಮಯ ತಾನು ಬಟ್ಟೆ ಹಾಕಿಕೊಂಡು ಬರುವುದಾಗಿ ಬಾರ್ ನ ಮೇಲೆ ಇರುವ ರೂಮಿನೊಳಗೆ ಹೋದ ಕರುಣಾಕರ ಯಾವುದೋ ಕೀಟನಾಶಕ ಸೇವನೆ ಮಾಡಿದ್ದಾನೆ.
ಘಟನೆಯಿಂದ ವಾಹನದಲ್ಲಿ ಪ್ರಯಾಣಿಸುವಾಗ ಮಾರ್ಗ ಮಧ್ಯೆ ಅಸ್ವಸ್ಥಗೊಂಡಿದ್ದು ಪೊಲೀಸರು ಆರೋಪಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.