ಸ್ಕೂಟರ್ ನಲ್ಲಿ 7 ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿಯ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು
ಮುಂಬೈ:ಸ್ಕೂಟರ್ ನಲ್ಲಿ 7 ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿಯ ವಿರುದ್ಧ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಮುಂಬೈನಲ್ಲಿ ಈ ಘಟನೆ ವರದಿಯಾಗಿದ್ದು, ನರಹತ್ಯೆ ಮಾಡಲು ಯತ್ನಿಸುತ್ತಿದ್ದ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ.
ಜೂ.23 ರಂದು 40 ವರ್ಷ ವಯಸ್ಸಿನ ವ್ಯಕ್ತಿ ಮುಂಬೈ ಸೆಂಟ್ರಲ್ ಬ್ರಿಡ್ಜ್ ಬಳಿ 7 ಮಂದಿಯನ್ನು ಸ್ಕೂಟರ್ ನಲ್ಲಿ ಕರೆದೊಯ್ಯುತ್ತಿದ್ದರು.
ಆರೋಪಿ ವ್ಯಕ್ತಿ ತೆಂಗಿನಕಾಯಿ ವ್ಯಾಪಾರಿಯಾಗಿದ್ದು, ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ ಆತನನ್ನು ಪೊಲೀಸರು ತಡೆದಿದ್ದರು.ವಾಹನ ಸವಾರನ ವಿರುದ್ಧ ಐಪಿಸಿ ಸೆಕ್ಷನ್ 308 ಹಾಗೂ ಮೋಟಾರು ವಾಹನ ಕಾಯ್ದೆಯಡಿಲ್ಲಿ ಕೂಡ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.