ಹಾವೇರಿ:ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.
ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಪೋಕ್ಸೋ ಕೇಸ್ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದಂತ ಮುರುಘಾ ಶ್ರೀ ಅಜ್ಞಾತ ಸ್ಥಳಕ್ಕೆ ತೆರಳಲು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.ಈ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ,ಅವರನ್ನು ಬಂಧಿಸಲಾಗಿದೆ.