ಎರಡನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಮುರುಘಾ ಶರಣರ ಬಿಡುಗಡೆಗೆ ಆದೇಶ ನೀಡಿದೆ.
ಜಾಮೀನು ರಹಿತ ಬಂಧನ ವಾರೆಂಟ್ ಗೆ ತಡೆ ನೀಡಿದ್ದು, ಚಿತ್ರದುರ್ಗಕ್ಕೆ ಕರೆತಂದಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಮತ್ತು ಅವರನ್ನು ಬಿಡುಗಡೆ ಮಾಡಬೇಕೆಂದು ಹೈಕೋರ್ಟ್ ಆದೇಶ ನೀಡಿದೆ.
ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿಂದ ನಿರ್ದೇಶನ ನೀಡಲಾಗಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಆದೇಶ ನೀಡಿದ್ದು, ಇದರೊಂದಿಗೆ ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಶ್ರೀ ಬಂಧನದ ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಶರಣರ ಬಿಡುಗಡೆಗೆ ಸೂಚನೆ ನೀಡಿದೆ.
ಎರಡನೇ ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದರು. ಮುರುಘಾ ಶ್ರೀಗಳ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ ಎರಡನೇ ಪ್ರಕರಣ ಸಂಬಂಧ ನ್ಯಾಯಾಧೀಶರಾದ ಬಿ ಕೆ ಕೋಮಲಾ ಅವರು ಇಂದು ಬಂಧನ ವಾರಂಟ್ ಆದೇಶ ಹೊರಡಿಸಿದ್ದರು.
ವಾರಂಟ್ ಆದೇಶದ ಬೆನ್ನಲ್ಲೇ ಚಿತ್ರದುರ್ಗದ ಡಿವೈಎಸ್ಪಿ ಅನಿಲ್ ಕುಮಾರ್, ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪಿಐ ಮುದ್ದು ರಾಜ್ ನೇತೃತ್ವದ ತಂಡವು ದಾವಣಗೆರೆ ನಗರದ ದೊಡ್ಡಪೇಟೆಯಲ್ಲಿರುವ ವಿರಕ್ತ ಮಠದಲ್ಲಿ ಮುರುಘಾ ಶರಣರನ್ನು ಬಂಧಿಸಿದ್ದರು. ಪೊಲೀಸರ ಬಿಗಿ ಬಂದೋಬಸ್ತಿನಲ್ಲಿ ಶರಣರನ್ನು ಬಂಧಿಸಿ, ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಕರೆದೊಯ್ಯಲಾಗಿತ್ತು. ಬಳಿಕ ನೇರವಾಗಿ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣರನ್ನು ಹಾಜರುಪಡಿಸಿದ್ದರು