ಮುತಾಲಿಕ್ ಅವರೇ ಹಿಂದೂಗಳ ಹತ್ಯೆಯನ್ನು ಎಷ್ಟು ಬಾರಿ ನೀವು ಮಾಡಿಸಿದ್ದೀರಿ ಎಂದು ಪ್ರಶ್ನಿಸಿದ ಕಾರ್ಕಳದ ಶಾಸಕ ಸುನಿಲ್ ಕುಮಾರ್; ವಿಡಿಯೋ ವೈರಲ್..

ಕಾರ್ಕಳ;ಮುತಾಲಿಕ್ ಅವರೇ ಟೈಗರ್ ಗ್ಯಾಂಗ್ ಮೂಲಕ ಉತ್ತರ ಕರ್ನಾಟಕದಲ್ಲಿ ಎಷ್ಟು ಬಾರಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದೀರಿ? ಹತ್ಯೆ ಮಾಡಿದ ಕೊಲೆಗಡುಗರು ಈಗಲೂ ಗುಲ್ಬರ್ಗಾ ಜೈಲಿನಲ್ಲಿದ್ದಾರೆ. ದಾಖಲೆಗಳು ಬೇಕಾ? ಎಂದು ಸುನಿಲ್ ಕುಮಾರ್ ಮುತಾಲಿಕ್ ವಿರುದ್ಧ ವಾಗ್ಧಾಳಿ ನಡೆಸಿರುವ ವಿಡಿಯೋ ವೈರಲ್ ಆಗಿದೆ.

ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಸುನಿಲ್ ಕುಮಾರ್,
ನಾನು 10 ಬಾರಿ ಹೇಳುತ್ತೇನೆ, ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಹಣ ಸಿಗುತ್ತದೆ ಎಂದರೆ ಅವರು ಏನು ಬೇಕಾದರೂ ಮಾಡುತ್ತಾರೆ ಎಂದು ಮುತಾಲಿಕ್ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಮೋದ್ ಮುತಾಲಿಕ್ ಈ ಹಿಂದೆ ಅನಂತಕುಮಾರ್, ಜೋಷಿ ವಿರುದ್ಧ ಸ್ಪರ್ಧೆ ಮಾಡಿದ್ದರು. ಇವತ್ತು ಕಾರ್ಕಳದಲ್ಲಿ ಸ್ಪರ್ಧೆ ಮಾಡಿದ್ದೀರಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲಿಗೆ ಡೀಲ್‌ಗೆ ಹೊರಟಿದ್ದೀರಿ?ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.

ಅಭಿವೃದ್ದಿ ಬಗ್ಗೆ ಕಾರ್ಕಳದಲ್ಲಿ ಅಪಹಾಸ್ಯ ಮಾಡಿದ್ರು, ಅವಮಾನ ಮಾಡಿದ್ರು,ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ.ಸಭ್ಯತೆಯಿಂದ ಇರುವ ಎಂದು ಈವರೆಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಿಂದ ಬಿಜೆಪಿಯ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರರಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡಿದ್ದರು. ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್ ಅವರ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದರು.ಭ್ರಷ್ಟಾಚಾರದ ಆರೋಪ ಮಾಡಿದ್ದರು.

ರಾಜ್ಯ ವಿಧಾನ ಸಭಾ ಚುನಾವಣೆಯ ವೇಳೆ ಮುತಾಲಿಕ್ ಸ್ಪರ್ಧೆಯಿಂದ ಕಾರ್ಕಳ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿತ್ತು.ಆದರೆ ಮುತಾಲಿಕ್ ಚುನಾವಣಾ ಫಲಿತಾಂಶದಲ್ಲಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು ಸುನಿಲ್ ಕುಮಾರ್ ವಿರುದ್ಧ ಸೋತಿದ್ದರು.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com