ಮುತಾಲಿಕ್ & ಸುನಿಲ್ ಕುಮಾರ್ ನಡುವೆ ನಿಲ್ಲದ ಸಮರ; ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ ಮುತಾಲಿಕ್

ಕಾರ್ಕಳ;ಚುನಾವಣೆ ಮುಗಿದರೂ ಮುತಾಲಿಕ್ ಮತ್ತು ಶಾಸಕ ಸುನಿಲ್ ಕುಮಾರ್ ಅವರ ನಡುವಿನ ಸಮರ ಕೊನೆಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ.

ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದಾರೆ.

ಕಾರ್ಕಳ ನಗರದ ಠಾಣೆಗೆ ಬೆಂಬಲಿಗರೊಂದಿಗೆ ತೆರಳಿದ ಪ್ರಮೋದ್ ಮುತಾಲಿಕ್, ಶಾಸಕರ ವಿರುದ್ಧ ಮಾನಹಾನಿ ಕೇಸ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ವಿಜಯೋತ್ಸವ ಸಭೆಯಲ್ಲಿ ಮುತಾಲಿಕ್ ವಿರುದ್ಧ ಸುನಿಲ್ ಕುಮಾರ್ ಮಾತನಾಡಿ, ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಮುಂದಿನ ಲೋಕಸಭೆಗೆ ಎಲ್ಲಿಗೆ ಡೀಲ್ ಮಾಡಲು ಹೊರಟಿದ್ದೀರಾ? ಉತ್ತರ ಕರ್ನಾಟಕದಲ್ಲಿ ಟೈಗರ್ ಗ್ಯಾಂಗ್ ಹೆಸರಿನಲ್ಲಿ ಎಷ್ಟು ಹಿಂದೂಗಳ‌ ಹತ್ಯೆ ಮಾಡಿಸಿದ್ದೀರಿ ಎಂದು ಪ್ರಶ್ನಿಸಿದ್ದರು.ಸುನಿಲ್ ಕುಮಾರ್ ಭಾಷಣದ ವಿಡಿಯೋ ಭಾರೀ ವೈರಲ್ ಆಗಿತ್ತು.

ಈ ಹಿನ್ನೆಲೆ ಪ್ರಮೋದ್ ಮುತಾಲಿಕ್, ಸುನಿಲ್ ಕುಮಾರ್ ವಿರುದ್ಧ ಮಾನಹಾನಿ ದೂರು ದಾಖಲಿಸಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಸ್ಪರ್ಧಿಸಿದ್ದರು.
ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ಕೇವಲ 4 ಸಾವಿರ ಮತಗಳನ್ನು ಪಡೆದುಕೊಂಡಿದ್ದರು.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com