ಶಾಲೆ ರಜೆಯಲ್ಲಿ ಅಜ್ಜಿ ಮನೆಗೆ ಬಂದಿದ್ದ ಬಾಲಕ ಶವವಾಗಿ ಪತ್ತೆ, ಕೊಲೆ ಶಂಕೆ

-ನದೀಮ್ ಮೃತ ಬಾಲಕ.

ಹುಬ್ಬಳ್ಳಿ; ಬಾಲಕನೋರ್ವ ಶುಕ್ರವಾರ ಮಿಲತ್ ನಗರದ‌ ದೊಡ್ಡಮನಿ (ಮಿರ್ಚಿ) ಮೈದಾನದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಭೈರಿದೇವರ ಕೊಪ್ಪದ ನದೀಮ್ ಹುಬ್ಬಳ್ಳಿ (8) ಮೃತಪಟ್ಟ ಬಾಲಕ.ಆತನ ದೇಹದ ಮೇಲೆ ಕೆಲ ಗಾಯಗಳಾಗಿದ್ದು, ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಶಾಲೆಗೆ ರಜೆ ಹಿನ್ನೆಲೆಯಲ್ಲಿ ನದೀಂ, ಬೆಂಡಿಗೇರಿ ಪೊಲೀಸ್ ಠಾಣೆ ಹತ್ತಿರ ಇರುವ ಕ್ರಿಶ್ಚಿಯನ್ ಕಾಲೋನಿಯ ದೊಡ್ಡನೆ ಚಾಳದಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಮೊನ್ನೆ ನದೀಂ ನಾಪತ್ತೆಯಾಗಿದ್ದ ಬಗ್ಗೆ ಪೋಷಕರು ಬೆಂಡಿಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ನಿನ್ನೆ ಮಧ್ಯಾಹ್ನ ನದೀಂ ಅಜ್ಜ ಪಾಳು ಬಿದ್ದ ಗೌಂಡ್‌ನಲ್ಲಿ ಹುಡುಕುತ್ತ ಹೋದಾಗ ಮುಳ್ಳಿನ ಕಂಟಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಈ ಬಾಲಕನ ಕೊಲೆಯಿಂದ ಇಡೀ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರ್ ಪತ್ನಿಗೆ ನಾನು ಕೆಲಸ ಕೊಡುತ್ತೇನೆ, ನಳಿನ್ ಕುಮಾರ್ ರಾಜೀನಾಮೆ ಕೊಡಲಿ- ಪ್ರತಿಭಾ ಕುಳಾಯಿ ಏನೆಲ್ಲಾ ಹೇಳಿದ್ರು?

ಮಂಗಳೂರು:ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ವಾಗ್ದಾಳಿ ನಡೆಸಿದ್ದಾರೆ.

Developed by eAppsi.com