ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ನಳಿನ್‌ ಕುಮಾರ್‌ ಹೇಳಿದ್ದಾರೆ.

ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ. ಹೊಂದಾಣಿಕೆ ಮಾಡಿಕೊಂಡಿದ್ದರೆ ಕನಕಪುರದಲ್ಲಿ ಡಿಕೆಶಿ ವಿರುದ್ಧ ಅಶೋಕ್‌ ಹಾಗೂ ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ರಾಜೀನಾಮೆ ನೀಡಿರುವ ಬಗ್ಗೆ ನಳಿನ್ ಕುಮಾರ್ ಕಟೀಲ್ ಬಳ್ಳಾರಿಯಲ್ಲಿ ಮಾಹಿತಿ ನೀಡಿದ್ದಾರೆ.ಕಳೆದ ಆಗಸ್ಟ್ ಗೆ ನಳಿನ್ ಅವರ ಅವಧಿ ಮುಗಿದಿತ್ತು.ಚುನಾವಣೆ ಹಿನ್ನೆಲೆ ಅಧ್ಯಕ್ಷಾವಧಿ ಮುಂದುವರಿಸಲಾಗಿತ್ತು.

ಟಾಪ್ ನ್ಯೂಸ್