ಉತ್ತರಪ್ರದೇಶ;ಮೊರಾದಾಬಾದ್ ಪೊಲೀಸರು ಮನೆಯಲ್ಲಿ ನಮಾಜ್ ಮಾಡಿದ 26 ಮುಸ್ಲಿಮರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸ್ಥಳೀಯ ಅಧಿಕಾರಿಗಳಿಂದ ಪೂರ್ವಾನುಮತಿಯಿಲ್ಲದೆ ಅವರು ಪ್ರಾರ್ಥನೆ ಮಾಡುತ್ತಿದ್ದಾರೆ ಮತ್ತು ಇದು “ಕಾನೂನುಬಾಹಿರ ಸಭೆ” ಎಂದು ಪೊಲೀಸರು ಹೇಳಿದ್ದಾರೆ.
ಚಂದ್ರ ಪಾಲ್ ಸಿಂಗ್ ಎಂಬಾತನ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ಛಾಜ್ಲೆಟ್ ಪ್ರದೇಶದ ದುಲ್ಹೆಪುರ್ ಗ್ರಾಮದ ಇಬ್ಬರು ಸ್ಥಳೀಯ ಗ್ರಾಮಸ್ಥರ ಮನೆಯಲ್ಲಿ ಹಲವು ಜನರು ಜಮಾಯಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ಎಂದು ಮೊರಾದಾಬಾದ್ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಕುಮಾರ್ ಮೀನಾ ಸುದ್ದಿಗಾರರಿಗೆ ತಿಳಿಸಿದರು.
ಸ್ಥಳೀಯ ಚಂದ್ರ ಪಾಲ್ ಸಿಂಗ್ ಅವರ ದೂರಿನ ಮೇರೆಗೆ 16 ಗುರುತಿಸಲ್ಪಟ್ಟ ಮತ್ತು 10ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ 505-2 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಹುಡುಕುತ್ತಿದ್ದೇವೆ ಎಂದು ಕುಮಾರ್ ಹೇಳಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ಭಾರತದಲ್ಲಿರುವ ಮುಸ್ಲಿಮರು ಇನ್ನು ಮುಂದೆ ಮನೆಯಲ್ಲಿಯೂ ನಮಾಜ್ ಮಾಡಲು ಸಾಧ್ಯವಿಲ್ಲವೇ? ನಾನು ಈಗ ಪ್ರಾರ್ಥನೆ ಸಲ್ಲಿಸಲು ಸರ್ಕಾರದಿಂದ/ಪೊಲೀಸರಿಂದ ಅನುಮತಿ ಪಡೆಯಬೇಕೇ? ಇದಕ್ಕೆ ನರೇಂದ್ರ ಮೋದಿ ಉತ್ತರಿಸಬೇಕು. ದೇಶದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆಯ ನಗರವಾಸಿಗಳೆಂದು ಪರಿಗಣಿಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.