ಗೋ ಕಳ್ಳತನ ಆರೋಪಿಸಿ ವ್ಯಕ್ತಿಯೋರ್ವನ ಥಳಿಸಿ ಕೊಲೆ

ಗೋ ಕಳ್ಳತನ ಆರೋಪಿಸಿ ವ್ಯಕ್ತಿಯೋರ್ವನ ಥಳಿಸಿ ಕೊಲೆ

ಅಗರ್ತಲಾ;ಗೋವುಗಳ ಕಳ್ಳತನಕ್ಕೆ ಯತ್ನ ಶಂಕೆಯ ಮೇಲೆ ಪಶ್ಚಿಮ ತ್ರಿಪುರ ಜಿಲ್ಲೆಯ ಗ್ರಾಮವೊಂದರಲ್ಲಿ 41 ವರ್ಷದ ವ್ಯಕ್ತಿಯನ್ನು ಗ್ರಾಮಸ್ಥರು ಹತ್ಯೆ ಮಾಡಿರುವ ಬಗ್ಗೆ ವರದಿಯಾಗಿದೆ.

ಗುರುವಾರ ಬೆಳಿಗ್ಗೆ ಪೂರ್ವ ಚಂದ್ರಾಪುರ ಗ್ರಾಮದ ನಿವಾಸಿ ನಂದು ಸರ್ಕಾರ್ ಎನ್ನುವ ವ್ಯಕ್ತಿ ಗೋವು ಕಳ್ಳತನ ಮಾಡುತ್ತಿದ್ದ ಎನ್ನುವ ಆರೋಪದ ಮೇಲೆ ಆತನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಸ್ಥಿತಿಯಲ್ಲಿದ್ದ ‌ನಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಹದ ಮೇಲೆ ಯಾವುದೇ ಗುರುತುಗಳಿರಲಿಲ್ಲ. ಆದರೆ ಹೊಟ್ಟೆಯ ಒಳಭಾಗಕ್ಕೆ ಪೆಟ್ಟು ಬಿದ್ದ ಕಾರಣ ಸಾವನ್ನಪ್ಪಿದ್ದಾರೆ ಎಂದು ಇಲ್ಲಿಯ ಪ್ರಭಾರ ಪೊಲೀಸ್‌ ಅಧಿಕಾರಿ ರಾಣಾ ಚಟರ್ಜಿ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಭಾಸ್ಕರ್ ಮತ್ತು ದಿಬ್ಕರ್ ಎಂಬ ಇಬ್ಬರನ್ನು ಬಂಧಿಸಲಾಗಿದೆ ಎಂದೂ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ