ಮಂಗಳೂರು; ಮೋದಿ ಆಗಮನಕ್ಕೆ ಭರದ ಸಿದ್ಧತೆ, 30 ಎಕರೆಯಲ್ಲಿ ಬೃಹತ್‌ ಪೆಂಡಾಲ್‌! ಹೇಗಿರಲಿದೆ ಸಿದ್ಧತೆ?

ಮಂಗಳೂರು; ಮೋದಿ ಆಗಮನಕ್ಕೆ ಭರದ ಸಿದ್ಧತೆ, 30 ಎಕರೆಯಲ್ಲಿ ಬೃಹತ್‌ ಪೆಂಡಾಲ್‌! ಹೇಗಿರಲಿದೆ ಸಿದ್ಧತೆ?

ಮಂಗಳೂರು;ಸೆ‌.2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆ ಬರದ ಸಿದ್ದತೆ ನಡೆಯುತ್ತಿದೆ.
ಮಂಗಳೂರಿನಲ್ಲಿ ಸರ್ಕಾರಿ ಕಾರ್ಯಕ್ರಮವನ್ನೇ ಅದ್ದೂರಿ ಮಾಡಲು ಬಿಜೆಪಿ ನಿರ್ಧರಿಸಿದೆ.

ಕೇರಳದ ಕೊಚ್ಚಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮೋದಿ ಅವರು ನೇರವಾಗಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 5 ಗಂಟೆಗೆ ನಗರದ ಹೊರವಲಯದ ಗೋಲ್ಡ್‌ ಫಿಂಚ್‌ ಸಿಟಿ ಮೈದಾನದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.ಇದೇ ಸಾರ್ವಜನಿಕ ಕಾರ್ಯಕ್ರಮದಲ್ಲೇ1200 ಕೋಟಿ ಸರ್ಕಾರಿ ಯೋಜನೆಗಳಿಗೆ ಶಿಲಾನ್ಯಾಸ,ಲೋಕಾರ್ಪಣೆ ನೆರವೇರಿಸಲಿದ್ದಾರೆ.

ಮೋದಿ ಕಾರ್ಯಕ್ರಮಕ್ಕಾಗಿ ಒಟ್ಟು 90 ಎಕರೆ ವಿಶಾಲವಾದ ಗೋಲ್ಡ್‌ ಫಿಂಚ್‌ ಮೈದಾನದ 30 ಎಕರೆಯಲ್ಲಿ ಬೃಹತ್‌ ಪೆಂಡಾಲ್‌ ಹಾಕಿ,ಪಕ್ಕದಲ್ಲೇ ಹೆಲಿಪ್ಯಾಡ್‌, ವಾಹನಗಳ ಪಾರ್ಕಿಂಗ್‌ಗೆ ಪ್ರತ್ಯೇಕ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಈ ಕುರಿತ ಕೆಲಸ-ಕಾರ್ಯಗಳು ಈಗಾಗಲೇ ಆರಂಭವಾಗಿವೆ.

ಕಾರ್ಯಕ್ರಮಕ್ಕೆ ಮಳೆಯಿಂದ ತೊಂದರೆಯಾಗದಂತೆಯೂ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ.

ಮೋದಿ ಕಾರ್ಯಕ್ರಮಕ್ಕೆ ಸಂಬಂಧಿಸಿ ಗುರುವಾರ ಜಿಲ್ಲಾ ಪಂಚಾಯಿತಿಯ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದ್ದು,ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನವನ್ನೂ ನೀಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಇಂಧನ ಸಚಿವರೂ ಆದ ಸುನಿಲ್‌ ಕುಮಾರ್‌,ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸುಮಾರು 1ಲಕ್ಷ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಬೇಕು.ಇದಕ್ಕಾಗಿ ಫಲಾನುಭವಿಗಳ ಪಟ್ಟಿತಕ್ಷಣವೇ ಸಿದ್ಧಪಡಿಸಿ ಸಮಾವೇಶಕ್ಕೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್