ಉಳ್ಳಾಲ; ಮಹಿಳೆ & ಮಗಳನ್ನು ಬೆನ್ನಟ್ಟಿಕೊಂಡು ಹೋದ ಪ್ರಕರಣ; ಓರ್ವ ಯುವಕ ಪೊಲೀಸ್ ವಶಕ್ಕೆ

ಉಳ್ಳಾಲ; ಮಹಿಳೆಯೊಬ್ಬರು ತನ್ನ ಮಗಳ ಜೊತೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಇಬ್ಬರು ಬೆನ್ನಟ್ಟಿ ಕೊಂಡು ಬಂದ ಘಟನೆ ಬಗ್ಗೆ ದೂರು ದಾಖಲಾಗಿದೆ.

ತಲಪಾಡಿ ನೆಕ್ಕೆಗುಡ್ಡೆ ಮಹಿಳೆ ತನ್ನ ಮಗಳನ್ನು ಕರೆದುಕೊಂಡು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಇಬ್ಬರು ಯುವಕರು ನೆಕ್ಕೆಗುಡ್ಡೆ ಬಳಿ ಕಾರು ನಿಲ್ಲಿಸಿ ಮಹಿಳೆ ಮತ್ತು ಮಗಳನ್ನು ಬೆನ್ನಟ್ಟಿ ಕೊಂಡು ಬಂದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವೇಳೆ ಹೆದರಿದ ಮಹಿಳೆ ಅಂಗಡಿ ಬಳಿ ರಕ್ಷಣೆ ಪಡೆದಿದ್ದು, ಈ ವೇಳೆ ಬೆನ್ನಟ್ಟಿಕೊಂಡು ಬಂದ ಯುವಕರು ವಾಪಸ್ ಆಗಿದ್ದಾರೆ ಎನ್ನಲಾಗಿದೆ.

ಮಹಿಳೆ ಮತ್ತು ಮಗಳನ್ನು ಬೆನ್ನಟ್ಟಿ ಕೊಂಡು ಬಂದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆಗೆ ಸಂಬಂಧಿಸಿ ಓರ್ವನಿಗೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್