ಬೆಂಗಳೂರು; ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್, ಮಗು ಮೃತ್ಯು

ಬೆಂಗಳೂರು;ಟ್ರಾಫಿಕ್​​​ ನಿಂದಾಗಿ ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ತಲುಪುವಲ್ಲಿ ವಿಫಲವಾಗಿ ಒಂದೂವರೆ ವರ್ಷದ ಕಂದಮ್ಮ ಮೃತಪಟ್ಟ ಘಟನೆಯೊಂದು ನಡೆದಿದೆ.

ಅಹಮದ್​​ ಮತ್ತು ರುಕ್ಸಾನಾ ದಂಪತಿಯು ನಿನ್ನೆ ಪುತ್ರಿ ಹುದಾ ಕೌಸರ್ ಜೊತೆ ತೆರಳುತ್ತಿದ್ದಾಗ ಬೈಕ್ ತುಮಕೂರು ಜಿಲ್ಲೆ ತಿಪಟೂರಿನ ಕೈಮರಾ ಬಳಿ ಬೊಲೆರೋ ವಾಹನಕ್ಕೆ ಢಿಕ್ಕಿಯಾಗಿತ್ತು.

ಈ ವೇಳೆ ಗಾಯಗೊಂಡ ಅಹಮದ್​​, ತಾಯಿ ರುಕ್ಸಾನಾಗೆ ತಿಪಟೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನದಿಂದ ಬೆಂಗಳೂರಿಗೆ ರವಾನಿಸಲು ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ರು.

ಆಸ್ಪತ್ರೆಗೆ ಸಾಗಿಸುವ ವೇಳೆ ನೆಲಮಂಗಲ ಬಳಿ ಟ್ರಾಫಿಕ್​ ಸಮಸ್ಯೆ ಎದುರಾಗಿದೆ. ಟ್ರಾಫಿಕ್​ನಿಂದ ಆಸ್ಪತ್ರೆಗೆ ತೆರಳಲಾಗದೆ ಒಂದೂವರೆ ವರ್ಷದ ಮಗು ಮೃತಪಟ್ಟಿದ್ದಾಳೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com