ಕುಂದಾಪುರ; ಸ್ನಾನ ಮಾಡುವಾಗ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು

ಕುಂದಾಪುರ: ಸ್ನಾನ ಮಾಡುತ್ತಿದ್ದಾಗ ಬಾತ್ ರೂಂನಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ನೇರಳಕಟ್ಟೆ ನಿವಾಸಿ ವೆಂಕಟೇಶ ಗಾಣಿಗ(65) ಎಂದು ಗುರುತಿಸಲಾಗಿದೆ.

ವೆಂಕಟೇಶ್ ಅವರು ಬಾತ್‌ರೂಮಿನಲ್ಲಿ ಸ್ನಾನ ಮಾಡುತ್ತಿರುವಾಗ ವಿದ್ಯುತ್ ಶಾಕ್‌ ಹೊಡೆದು ಬಿದ್ದರೆನ್ನಲಾಗಿದೆ.

ತಕ್ಷಣ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಅಸ್ವಸ್ಥಗೊಂಡ ವೆಂಕಟೇಶ್ ಗಾಣಿಗ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್