ಬೆಂಗಳೂರು:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.
2022ರ ಜುಲೈ 26ರಂದು ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಅವರ ಅಂಗಡಿಯ ಮುಂದೆ ಹತ್ಯೆಗೀಡಾಗಿದ್ದರು.
ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ತುಫೈಲ್ ಎಂಎಚ್ ಮತ್ತು ಮಹಮ್ಮದ್ ಜಬೀರ್ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿತ್ತು.
ಇದಲ್ಲದೆ ಯುಎಪಿಎ ಕಾಯ್ದೆಯಡಿ ಒಟ್ಟು ಈ ಪ್ರಕರಣದಲ್ಲಿ 21 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ.
ಕೊಲೆ ನಂತರ ತಲೆಮರೆಸಿಕೊಂಡಿದ್ದ ತುಫೈಲ್ ನನ್ನು ಎನ್‌ಐಎ ತಂಡ ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿತ್ತು.ಕೊಡಗು ಮೂಲದ ಎಂ.ಎಚ್.ತುಫೈಲ್, ಎನ್‌ಐಎ ತನಿಖೆಯ ಪ್ರಕಾರ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಿಗೆ ಮೈಸೂರು, ಕೊಡಗು ಹಾಗೂ ತಮಿಳುನಾಡಿನ ಈರೋಡ್‌ನಲ್ಲಿ ಆಶ್ರಯ ಕೊಟ್ಟಿದ್ದರು ಎಂದು ಆರೋಪಿಸಲಾಗಿದೆ.