ಪುತ್ತೂರು:ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿಯ ಪಡಂಗಡಿಯಲ್ಲಿ ರಾಷ್ಟ್ರೀಯ ತನಿಖಾದಳದ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ನಿವಾಸಕ್ಕೆ ಎನ್.ಐ.ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ನೌಷದ್ ಮನೆಯಲ್ಲಿರಲ್ಲಿಲ್ಲ ಎನ್ನಲಾಗಿದ್ದು, ಇದರಿಂದಾಗಿ ಅಧಿಕಾರಿಗಳು ಎನ್.ಐ.ಎ ಕಚೇರಿಗೆ ಹಾಜರಾಗುವಂತೆ ನೌಷದ್ ಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಇದಲ್ಲದೆ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಸೋಮವಾರ ಪೇಟೆಯಲ್ಲಿ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.