ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರ್ ಪತ್ನಿ!

ಬೆಂಗಳೂರು;ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರದ ಉದ್ಯೋಗಕ್ಕೆ ನೂತನ ಸರಕಾರ ಬಂದ ಬಳಿಕ ತಡೆ ಉಂಟಾಗಿದೆ ಎಂದು ವರದಿಯಾಗಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರವೀಣ್ ಪತ್ನಿಗೆ ಮುಖ್ಯಮಂತ್ರಿಯ ವಿಶೇಷಾಧಿಕಾರ ಬಳಸಿ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸಲಾಗಿತ್ತು.

ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ.22ರಂದು ನೂತನ ಅವರಿಗೆ ನೇಮಿಸಿದ್ದರು.

ಆದರೆ ಈಗ ಕೆಲಸದಿಂದ ಬಿಡುಗಡೆಗೊಳಿಸಿರುವ ಆದೇಶ ಅವರ ಕೈ ತಲುಪಿದೆ ಎಂಬ ಬಗ್ಗೆ ವರದಿಯಾಗಿದೆ.

ಈ ಹಿಂದೆ ಸರಕಾರದ ಆದೇಶದಲ್ಲಿ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು ಎನ್ನಲಾಗಿದೆ.

ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ತಮ್ಮನ್ನು ಮುಂದುವರಿಸಲು ನೂತನಕುಮಾರಿ ಅವರು ಕೋರಿದರೆ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನ‌ ಸಿಎಂ ಕಚೇರಿಯಲ್ಲಿ ಕೆಲಸ ಬೇಡ ಎಂದ ನೂತನ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ಸ್ಥಳೀಯವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು.ಅವರು ಅಕ್ಟೋಬರ್ 14ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.

ನೆಟ್ಟಾರು ಹತ್ಯೆ ಬಳಿಕ ಪತ್ನಿ ನೂತನಾ ಅವರಿಗೆ ಬಿಜೆಪಿ ಸರಕಾರ ಕೆಲಸ ಕೊಡಿಸಿ ಭಾರೀ ಸುದ್ದಿಯಾಗಿತ್ತು, ಆದರೆ ಇದೀಗ ಉದ್ಯೋಗದ ನೇಮಕಾತಿ ತಾತ್ಕಾಲಿಕವಾಗಿತ್ತು ಎನ್ನುವುದು ಬಯಲಾಗಿದೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com