ದಾವೂದ್ ಇಬ್ರಾಹೀಂ ಮತ್ತು ಸಹಚರರ ಮಾಹಿತಿ ಕೊಟ್ಟವರಿಗೆ ಬಹುಮಾನ ನೀಡುವುದಾಗಿ NIA ಘೋಷಣೆ

ಮುಂಬೈ;ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿಎನ್ ಐಎ ಘೋಷಿಸಿದೆ.

ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ ಐಎ), ದಾವೂದ್ ಇಬ್ರಾಹಿಂ ಗ್ಯಾಂಗ್ ನ ಕಿಂಗ್ ಪಿನ್ ಛೋಟಾ ಶಕೀಲ್ ಹಾಗೂ ಇತರ ಉಗ್ರರಾದ ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ,ಟೈಗರ್ ಮೆಮೊನ್ ವಿರುದ್ಧ ತಲಾ 15 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಇತರ ನಟೋರಿಯಸ್ ಉಗ್ರರು ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಎ ತೊಯ್ಬಾ, ಜೈಶ್ ಎ ಮೊಹಮ್ಮದ್,ಅಲ್ ಖೈದಾ ಜೊತೆ ಕೈಜೋಡಿಸುವ ಮೂಲಕ ಕಾರ್ಯನಿರ್ವಹಿಸುತ್ತಿದೆ ಎಂದು ಎನ್ ಐಎ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ದಾವೂದ್ ಇಬ್ರಾಹಿಂ 1993ರಲ್ಲಿ ವಾಣಿಜ್ಯ ನಗರಿ ಮುಂಬೈನ ವಿವಿಧೆಡೆ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದ ರೂವಾರಿಯಾಗಿದ್ದಾನೆ.ಇದಾದ ಬಳಿಕ ದಾವೂದ್ ಇಬ್ರಾಹಿಂನನ್ನು ಅಂತರಾಷ್ಟ್ರೀಯ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಘೋಷಿಸಿತ್ತು.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು