ಬಂಟ್ವಾಳ ಸೇರಿ ದ.ಕ.ಜಿಲ್ಲೆಯ ಒಟ್ಟು 5 ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೈದರಾಬಾದ್ ನಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಎರಡು ಮನೆಗಳಿಗೆ ದಾಳಿ ನಡೆಸಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಒಟ್ಟು 5 ಮಂದಿಯ ಮನೆಗಳಿಗೆ ರವಿವಾರ ದಾಳಿ ನಡೆಸಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಟ್ವಾಳ ತಾಲೂಕಿನ ಬೋಗೊಡಿ ನಿವಾಸಿ ಇಬ್ರಾಹಿಂ ಹಾಗೂ ವಳಚ್ಚಿಲ್ ನಿವಾಸಿಯಾಗಿರುವ ಮುಸ್ತಾಕ್ ಎಂಬವರ ಮನೆಗೆ ದಾಳಿ ನಡೆಸಿ ಎನ್‌ಐಎ ಪೋಲೀಸರು ಪರಿಶೀಲನೆ ನಡೆಸಿದ್ದಾರೆ.
ದ.ಕ.ಜಿಲ್ಲೆ ಮಾತ್ರವಲ್ಲದೆ, ದೇಶದೆಲ್ಲೆಡೆ ಒಟ್ಟು 5 ರಾಜ್ಯಗಳಲ್ಲಿ ಎನ್.ಐ.ಎ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.