ಕೇರಳ; NIA ಸಮನ್ಸ್ ನೀಡಿದ್ದ ಯುವಕನ ತಂದೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ;ಮಗನ ಜೊತೆಗೆ ಕೊಚ್ಚಿಗೆ ಬಂದಿದ್ದ ತಂದೆ ಆತ್ಮಹತ್ಯೆ?

ಕೊಚ್ಚಿ:ಎಲತ್ತೂರ್ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಯಿಂದ ಸಮನ್ಸ್ ಪಡೆದಿದ್ದ ದೆಹಲಿಯ ಶಾಹೀನ್ ಬಾಗ್‌ನ ವ್ಯಕ್ತಿಯೊಬ್ಬರು ಶುಕ್ರವಾರ ಕೊಚ್ಚಿಯ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೊಹಮ್ಮದ್ ಶಫೀಕ್ (46) ಹೋಟೆಲ್‌ನ ಬಾತ್ರೂಮ್‌ನಲ್ಲಿ ಪೈಪ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇದು ಆತ್ಮಹತ್ಯೆಯಾಗಿರಬೇಕು ಎಂದು ಶಂಕಿಸಿರುವ ಎರ್ನಾಕುಲಂ ಪೊಲಿಸರು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏಪ್ರಿಲ್ 2ರಂದು ಕಲ್ಲಿಕೋಟೆಯಲ್ಲಿ ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರು ಮೃತಪಟ್ಟು, ಒಂಬತ್ತು ಮಂದಿಗೆ ಸುಟ್ಟ ಗಾಯಗಳಾಗಿದ್ದವು.

ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಶಫೀಕ್ ತಮ್ಮ ಮಗ ಮುಹಮ್ಮದ್ ಮೋನಿಸ್ (26) ಜತೆಗೆ ಕೊಚ್ಚಿಗೆ ಬಂದು ಮಂಗಳವಾರ ಹೋಟೆಲ್ ರೂಂ ಪಡೆದಿದ್ದರು.

ಪ್ರಕರಣದ ಏಕೈಕ ಆರೋಪಿ ಶಾರೂಖ್ ಸೈಫಿ ಎಂಬಾತನ ಸಹಪಾಠಿಯಾಗಿದ್ದ ಮೋನಿಸ್ ಜತೆ ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕ ಹೊಂದಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಈ ಅಪರಾಧವನ್ನು ಎಸಗಲು ಸೈಫಿಗೆ ಯಾರಾದರೂ ಪ್ರಭಾವ ಬೀರಿದ್ದಾರೆಯೇ ಎಂದು ಪತ್ತೆ ಹಚ್ಚಲು ವಿಚಾರಣೆಗೆ ಹಾಜರಾಗುವಂತೆ ಎನ್‌ಐಎ ಅಧಿಕಾರಿಗಳು ಮೋನಿಸ್‌ಗೆ ಸಮನ್ಸ್ ನೀಡಿದ್ದರು.

ತಂದೆ- ಮಗ ಕೊಚ್ಚಿಗೆ ಆಗಮಿಸಿದ ಬಳಿಕ ಎನ್‌ಐಎ ಅಧಿಕಾರಿಗಳು ಹಲವು ಬಾರಿ ಮೋನಿಸ್‌ನನ್ನು ವಿಚಾರಣೆಗೆ ಗುರಿಪಡಿಸಿದ್ದರು. ಆದರೆ ಇದುವರೆಗೂ ಆತನನ್ನು ಪ್ರಕರಣದಲ್ಲಿ ಆರೋಪಿ ಎಂದು ಎನ್‌ಐಎ ಹೆಸರಿಸಿಲ್ಲ.

ಗುರುವಾರ ರಾತ್ರಿ ತಂದೆ ಮತ್ತು ಮಗನನ್ನು ಹೋಟೆಲ್ ಸಿಬ್ಬಂದಿ ನೋಡಿದ್ದಾರೆ. ಮರು ದಿನ ಸಂಜೆ ತಂದೆ ನಾಪತ್ತೆಯಾಗಿರುವ ಬಗ್ಗೆ ಮೋನಿಸ್ ಮಾಹಿತಿ ನೀಡಿ, ಬಾತ್‌ರೂಂ ಒಳಗಿನಿಂದ ಲಾಕ್ ಆಗಿದೆ ಎಂದು ಸಿಬ್ಬಂದಿಗೆ ಹೇಳಿದ್ದಾರೆ. ಬಾಗಿಲು ಮುರಿದು ನೋಡಿದಾಗ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ‌.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com