ನಂತೂರು ಸರ್ಕಲ್ ನಲ್ಲಿ ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿ; ಇಬ್ಬರು ಮೃತ್ಯು, ಟಿಪ್ಪರ್ ಚಾಲಕನಿಗೆ ಸ್ಥಳೀಯರಿಂದ ಧರ್ಮದೇಟು

ಮಂಗಳೂರು;ಸ್ಕೂಟರ್ ಗೆ ಟಿಪ್ಪರೊಂದು ಢಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟ ಘಟನೆ ನಂತೂರು ಸರ್ಕಲ್ ಬಳಿ ನಡೆದಿದೆ.

ಸುಲ್ತಾನ್ ಬತ್ತೇರಿ ನಿವಾಸಿ ಸ್ಯಾಮುಯೆಲ್ ಜೇಸುದಾಸ್ (66) ಹಾಗೂ ಸಂಬಂಧಿ ಭೂಮಿಕಾ(17) ಮೃತರು ಎಂದು ತಿಳಿದು ಬಂದಿದೆ.

ಇವರು ತೊಕ್ಕೊಟ್ಟಿನಿಂದ ಸುಲ್ತಾನ್ ಬತ್ತೇರಿಯತ್ತ ತೆರಳುತ್ತಿದ್ದ ವೇಳೆ ನಂತೂರು ಸರ್ಕಲ್ ನಲ್ಲಿ ಪಂಪ್‌ವೆಲ್ ಕಡೆಯಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ ರಸ್ತೆಗೆ ಬಿದ್ದ ಇಬ್ಬರು ಸವಾರರು ಟಿಪ್ಪರಿನಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ
ಆಸ್ಪತ್ರೆಗೆ‌ ಸಾಗಿಸಲಾಯಿತಾದರೂ ಈ ವೇಳೆ ಅವರು ಮೃತಪಟ್ಟಿದ್ದಾರೆ.

ಈ ಘಟನೆ ನಡೆದ ಬೆನ್ನಲ್ಲೇ ಸ್ಥಳದಲ್ಲಿದ್ದ ಸ್ಥಳೀಯರು ಟಿಪ್ಪರ್ ಚಾಲಕನನ್ನು ಲಾರಿಯಿಂದ ಎಳೆದುಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.ಅಜಾಗರೂಕತೆಯಿಂದ ಟಿಪ್ಪರ್ ಚಲಾಯಿಸಿ ಇಬ್ಬರ ಸಾವಿಗೆ ಕಾರಣ ಪ್ರಕರಣದಲ್ಲಿ ಟಿಪ್ಪರ್ ಚಾಲಕ ಸತೀಶ್ ಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com