ನುಹ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ 200 ಮಂದಿಯ ಬಂಧನ

ಹರಿರ್ಯಾಣ;ನುಹ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಮತ್ತು ಗಲಭೆಗೆ ಸಂಬಂಧಿಸಿದಂತೆ ಈವರೆಗೆ 200 ಜನರನ್ನು ಬಂಧಿಸಲಾಗಿದೆ ಮತ್ತು 102 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎರಡು ಗುಂಪುಗಳ ನಡುವೆ ಭುಗಿಲೆದ್ದ ಹಿಂಸಾಚಾರದಲ್ಲಿ ಇಬ್ಬರು ಪೊಲೀಸ್ ಹೋಂಗಾರ್ಡ್‌ಗಳು ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ.88 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತಷ್ಟು ಮಾಹಿತಿ ನೀಡಿದ್ದಾರೆ.

ಧಾರ್ಮಿಕ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು 200 ಜನರನ್ನು ಬಂಧಿಸಲಾಗಿದೆ ಮತ್ತು ಘರ್ಷಣೆಯಲ್ಲಿ 88 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ಧಾರ್ಮಿಕ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಹಿಂಸಾಚಾರ ನಡೆದಿತ್ತು. ಹಿಂಸಾಚಾರದಲ್ಲಿ ಇಬ್ಬರು ಹೋಂಗಾರ್ಡ್‌ಗಳು ಗುಂಡಿಗೆ ಬಲಿಯಾಗಿದ್ದು, ಸುಮಾರು ಹನ್ನೆರಡು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರದ ಹಿಂದೆ ದೊಡ್ಡ ಪಿತೂರಿ ಇದೆ ಎಂದು ಆರೋಪಿಸಿರುವ ಹರಿಯಾಣ ಗೃಹ ಸಚಿವ ಅನಿಲ್ ವಿಜ್, ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಆರೋಪಿಗಳನ್ನು ಯಾರನ್ನು ಬಿಡಲಾಗುವುದಿಲ್ಲ. ಹಿಂಸಾಚಾರದ ಮಾಸ್ಟರ್ ಮೈಂಡ್‌ಗೆ ಇದಕ್ಕೆ ಸರಿಯಾಗಿ ಶಿಕ್ಷೆಯಾಗಲಿದೆ. ಸಾರ್ವಜನಿಕ ಆಸ್ತಿ ಹಾನಿಗೆ ಗಲಭೆಕೋರರೆ ಪಾವತಿಸಬೇಕಾಗುವುದು ಎಂದು ಗೃಹ ಸಚಿವ ಅನಿಲ್ ವಿಜ್ ಎಚ್ಚರಿಸಿದ್ದಾರೆ. ಜೊತೆಗೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ನಾನು ಎಲ್ಲರಿಗು ಮನವಿ ಮಾಡುತ್ತೇನೆ. ಶಾಂತಿ ಸುವ್ಯವಸ್ಥೆಯನ್ನು ನೋಡಿಕೊಳ್ಳಲು ರಾಜ್ಯ ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರ ಅರೆಸೇನಾ ಪಡೆಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಟಾಪ್ ನ್ಯೂಸ್