ಬೆಂಗಳೂರು;ರಾಜ್ಯ ವಿಧಾನಸಭಾ ವಿಶೇಷ ಅಧಿವೇಶನ ಇಂದು ಆರಂಭವಾಗಿದೆ.ಅಧಿವೇಶನದಲ್ಲಿ ಶಾಸಕರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಚೆನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ್ ಶಿವಗಂಗ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ಪ್ರತಿಜ್ಞೆ ಸ್ವೀಕಾರ ಮಾಡಿದ್ದಾರೆ.ಇದಕ್ಕೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಎಚ್ಚೆತ್ತ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರು ವ್ಯಕ್ತಿಗತ ಹೆಸರಿನಲ್ಲಿ ಪ್ರಮಾಣವಚನ ತೆಗೆದುಕೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಂತರ ಶಾಸಕ ಬಸವರಾಜ್ ಅವರಿಗೆ ದೇವರ ಹೆಸರಲ್ಲಿ ಪ್ರತಿಜ್ಞೆ ಸ್ವೀಕರಿಸುವಂತೆ ತಾಕೀತು ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಗವಂತನ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.ಡಿಸಿಎಂ ಡಿಕೆಶಿವಕುಮಾರ್ ನೊಣವಿನಕೆರೆ ಗಂಗಾಧರ ಅಜ್ಜನ ಹೆಸರಲ್ಲಿ ಹಾಗೂ ಸತ್ಯ, ನಿಷ್ಠೆಯ ಮೇಲೆ ಪ್ರಮಾಣ ಮಾಡಿದರು.
ಸಚಿವ ಡಾ.ಜಿ ಪರಮೇಶ್ವರ ಅವರು ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೆ.ಹೆಚ್.ಮುನಿಯಪ್ಪ, ಎಂಬಿ ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕೆಜೆ ಜಾರ್ಜ್ ಭಗವಂತನ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ನಂತರ ಸತೀಶ್ ಜಾರಕಿಹೊಳಿ ಅವರು ಸಂವಿಧಾನದ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದರು.
ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹಿಂದುತ್ವ ಮತ್ತು ಗೋಮಾತೆ ಹೆಸರಿನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರಮಾಣವಚನ ಸ್ವೀಕರಿಸಿದ್ದಾರೆ.