ಒಡಿಶಾ ಆರೋಗ್ಯ ಸಚಿವರನ್ನು ಗುಂಡಿಟ್ಟು ಹತ್ಯೆ ಮಾಡಿದ ಪೊಲೀಸ್ ಅಧಿಕಾರಿ ಮಾನಸಿಕ ಅಸ್ವಸ್ಥ!; ಏನಿದು ಟ್ವಿಸ್ಟ್?

ಒಡಿಶಾ; ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮೇಲೆ ಎಎಸ್ ಐ ಗೋಪಾಲಕೃಷ್ಣ ದಾಸ್ ಐದು ಸುತ್ತು ಗುಂಡಿನ ದಾಳಿ ನಡಿಸಿದ್ದರು ಗಂಭೀರವಾಗಿದ್ದ ಸಚಿವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಇದೀಗ‌ ಹತ್ಯೆ ಆರೋಪಿ ಎಎಸ್ ಐ ಗೋಪಾಲಕೃಷ್ಣ ದಾಸ್ ಮನೋವೈದ್ಯರಿಂದ ಬೈಪೋಲಾರ್ ಡಿಸಾರ್ಡರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿ ತಿಳಿಸಿದೆ.

ಮಾನಸಿಕ ಅಸ್ವಸ್ಥತೆಯ ಇರುವ ದಾಸ್‌ಗೆ ಹೇಗೆ ಸೇವಾ ರಿವಾಲ್ವರ್ ನೀಡಲಾಗಿದೆ ಮತ್ತು ಬ್ರಜರಾಜನಗರದ ಪೊಲೀಸ್ ಪೋಸ್ಟ್‌ನ ಉಸ್ತುವಾರಿಯಾಗಿ ನೇಮಿಸಲಾಗಿದೆ ಎಂಬ ಪ್ರಶ್ನೆ ಮೂಡಿದೆ.

ಎಂಕೆಸಿಜಿ ಮೆಡಿಕಲ್ ಕಾಲೇಜಿನ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಚಂದ್ರಶೇಖರ್ ತ್ರಿಪಾಠಿ ಮಾತನಾಡಿ, ಗೋಪಾಲಕೃಷ್ಣ ಬೈಪೋಲಾರ್ ಡಿಸಾರ್ಡರ್‌ನಿಂದ ಬಳಲುತ್ತಿದ್ದಾರೆ.ಹತ್ತು ವರ್ಷಗಳ ಹಿಂದೆ ನನ್ನ ಕ್ಲಿನಿಕ್‌ಗೆ ಮೊದಲ ಬಾರಿಗೆ ಭೇಟಿ ನೀಡಿದ್ದರು.ಅವರು ಬೇಗ ಕೋಪಗೊಳ್ಳುತ್ತಿದ್ದರು.ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ನಿಯಮಿತವಾಗಿ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆಯೇ ಎಂದು ನನಗೆ ಖಚಿತವಿಲ್ಲ. ನಿಯಮಿತವಾಗಿ ಔಷಧಿ ತೆಗೆದುಕೊಳ್ಳದಿದ್ದರೆ, ರೋಗವು ಮತ್ತೆ ಕಾಣಿಸಿಕೊಳ್ಳುತ್ತದೆ.ಅವರು ನನ್ನನ್ನು ಭೇಟಿಯಾಗಿ ಒಂದು ವರ್ಷ ಕಳೆದಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com