ಹೊಸದಿಲ್ಲಿ: ಒಡಿಶಾ ರೈಲು ದುರಂತ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಅರುಣ್ ಕುಮಾರ್ ಮಹಂತ, ಮುಹಮ್ಮದ್ ಅಮೀರ್ ಖಾನ್ ಮತ್ತು ಪಪ್ಪು ಕುಮಾರ್ ವಿರುದ್ಧ ಕೊಲೆಗೆ ಸಮನಾಗದ ನರಹತ್ಯೆ ಮತ್ತು ಸಾಕ್ಷ್ಯನಾಶದ ಆರೋಪ ಹೊರಿಸಿ ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಈಗಾಗಲೇ ಪ್ರಕರಣಕ್ಕೆ ಸಂಭಧಿಸಿದಂತೆ ರೈಲ್ವೆ ಸುರಕ್ಷತಾ ಆಯುಕ್ತರು ರೈಲ್ವೆ ಮಂಡಳಿಗೆ ಸಲ್ಲಿಸಿದ್ದ ವರದಿಯಲ್ಲಿ, ಮಾನವ ಪ್ರಮಾದ ಮತ್ತು ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಹೇಳಿತ್ತು.
290 ಮಂದಿ ಪ್ರಕರಣದಲ್ಲಿ ಬಲಿಯಾಗಿದ್ದರು.
ಈ ಮೂವರಿಗೆ ಅವಘಡದ ಬಗ್ಗೆ ತಿಳಿದಿತ್ತು ಎಂಬ ಕಾರಣದಿಂದ ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆಯ ಆರೋಪ ಹೊರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.