ಬೆಂಗಳೂರು:ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ಬಿಜೆಪಿ ಟಿಕೆಟ್ ಕೊಡುವುದಾಗಿ ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ವಿರುದ್ಧ ಇದೀಗ ಮತ್ತೊಂದು ವಂಚನೆ ಕೇಸ್ ದಾಖಲಾಗಿದೆ.
ಚೈತ್ರಾ ಕುಂದಾಪುರ ಬಟ್ಟೆ ಅಂಗಡಿ ಹಾಕಿಸಿ ಕೊಡುವುದಾಗಿ 5 ಲಕ್ಷ ಪಡೆದು ವಂಚಿಸಿದ ಆರೋಪದ ಸಂಬಂಧ ಉಡುಪಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಕುರಿತು ಬಿಜೆಪಿ ಕಾರ್ಯಕರ್ತ ಸುಧೀನ್ ಎಂಬುವರು ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸುಧೀನ್ ಬಿಜೆಪಿ ಕಾರ್ಯಕರ್ತನೆ ಆಗಿದ್ದಾರೆ. ಅವರು ಬಟ್ಟೆ ಅಂಗಡಿ ಉದ್ಯಮ ನಡೆಸಲು ನಿರ್ಧರಿಸಿದ್ದರು. ಈ ವೇಳೆ ಚೈತ್ರಾ ಹಣ ಪಡೆದು ವಂಚಿಸಿದ್ದಾಳೆ ಎಂದು ದೂರು ನೀಡಲಾಗಿದೆ.