ಕಲಬುರ್ಗಿ:ಆನ್ ಲೈನ್ ನಲ್ಲಿ ಪಬ್ ಜಿ ಆಡಿ ಹಣ ಕಳೆದುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಕಲಬುರ್ಗಿ ನಗರದ ಖಾಸಗಿ ಕಾಲೇಜಿನಲ್ಲಿ ಬಿಇ ವಿದ್ಯಾರ್ಥಿ ಪ್ರವೀಣ್ ಪಾಟೀಲ್(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಪ್ರವೀಣ್ ಚಿತ್ತಾಪುರ ತಾಲೂಕಿನ ಸುಲಹಳ್ಳಿ ಗ್ರಾಮದವನಗಿದ್ದ.ಪ್ರವೀಣ್ ಕೃತಕ ಬುದ್ದಿಮತ್ತೆ ಹಾಗೂ ಮೆಷಿನ್ ಲರ್ನಿಂಗ್ ವಿಷಯದಲ್ಲಿ ಬಿಇ ಕೋರ್ಸ್ ಮಾಡುತ್ತಿದ್ದರು ಎನ್ನಲಾಗಿದೆ.
ಅತಿಯಾಗಿ ಪಬ್ ಜಿ ಆಡುತ್ತಿದ್ದ ಪ್ರವೀಣ್ ಅದರಲ್ಲಿ ಸಿಗುವ ಕೆಲವು ವಿಶೇಷ ವಸ್ತುಗಳ ಖರೀದಿಗೆ ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.ಕೊನೆಗೆ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಆರ್.ಜಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.