ಜಗದೀಶ್ ಶೆಟ್ಟರ್ ಆರೆಸ್ಸೆಸ್ ಸಿದ್ದಾಂತದಲ್ಲಿ ಬೆಳೆದು ಕಾಂಗ್ರೆಸ್ ಸೇರಿದ ತಕ್ಷಣ ಜಾತ್ಯಾತೀತರಾಗಲು ಸಾಧ್ಯವೇ? ಒವೈಸಿ ಏನೆಲ್ಲಾ ಹೇಳಿದ್ರು?

ಹುಬ್ಬಳ್ಳಿ:ಜಗದೀಶ ಶೆಟ್ಟರ್ ಆರ್ಎಸ್ಎಸ್ ತತ್ವ ಸಿದ್ಧಾಂತದಲ್ಲಿ ಬೆಳೆದು, ಬಿಜೆಪಿ ಪ್ರಗತಿಗೆ ಕಾರಣರಾದವರು.
ಏಕಾಏಕಿ ಅವರನ್ನು ಕಾಂಗ್ರೆಸ್ ಮುಖಂಡರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು, ಜಾತ್ಯತೀತ ಎಂದು ಪ್ರಮಾಣ ಪತ್ರ ನೀಡುತ್ತಾರೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕಿಡಿ ಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಎಐಎಂಐಎಂ ಬಿಜೆಪಿಯ ‘ಬಿ’ ಟೀಮ್ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅಸಾದುದ್ದೀನ್ ಓವೈಸಿ, ಕರ್ನಾಟಕದಲ್ಲಿ ತಮ್ಮ ಪಕ್ಷ ಕೇವಲ ಎರಡು ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಲಿದೆ. ಎಐಎಂಐಎಂ ಹುಬ್ಬಳ್ಳಿ ಧಾರವಾಡ ಪೂರ್ವ ಮತ್ತು ಬಸವನ ಬಾಗೇವಾಡಿಯಿಂದ ಸ್ಪರ್ಧಿಸುವುದರ ಜೊತೆಗೆ ಜಮಖಂಡಿಯಲ್ಲಿ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ಹೇಳಿದರು.

ತಮ್ಮ ಪಕ್ಷ ಸ್ಪರ್ಧಿಸುತ್ತಿರುವುದು ಬೇರೆ ಪಕ್ಷಗಳ ಅಭ್ಯರ್ಥಿಗಳ ಸೋಲು-ಗೆಲುವಿಗಾಗಿ ಅಲ್ಲ, ಸೀಟು ಗೆಲ್ಲುವುದಕ್ಕಾಗಿ ಎಂದು ಸ್ಪಷ್ಟಪಡಿಸಿದರು.ಜಗದೀಶ್ ಶೆಟ್ಟರಿಗ್ ಕಾಂಗ್ರೆಸ್ ಗೆ ಸೇರಿದ ತಕ್ಷಣ ಜಾತ್ಯತೀತ ಪ್ರಮಾಣ ಪತ್ರ ನೀಡಲು ಅವರೇನು ನೋಟರಿ ಅಂಗಡಿ ಇಟ್ಟಿದ್ದಾರೆಯೇ? ಇಂತವರಿಂದ ರಾಜ್ಯದ ಜನತೆ ಏನುನ್ನು ನಿರೀಕ್ಷಿಸಲು ಸಾಧ್ಯ? ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿ ಚುನಾವಣೆಯಲ್ಲಿ ಸೋಲಲು ನನ್ನ ಪಕ್ಷವೇ ಕಾರಣವೇ? ಕಾಂಗ್ರೆಸ್ 50 ಸ್ಥಾನಗಳನ್ನು ಗೆದ್ದುಕೊಂಡಿತು ಕಾಂಗ್ರೆಸ್ ಪಕ್ಷದ ಶಾಸಕರು ಸರ್ಕಾರ ರಚನೆಗೆ ಸಹಾಯ ಮಾಡಲು ಬಿಜೆಪಿಗೆ ಸೇರಿದರು ಎಂದು ವಾಗ್ದಾಳಿ ನಡೆಸಿದರು. ಯಾವ ಪಕ್ಷವೂ ಸೋಲಲೆಂದು ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ. ನಾವು ಕೆಲವು ಯೋಜನೆ, ತಂತ್ರಗಳನ್ನು ರೂಪಿಸಿ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ‌ ಎಂದು ಹೇಳಿದರು.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com