ಹೊಸದಿಲ್ಲಿ: ಕೇಂದ್ರ ಸರಕಾರವು ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ.
106 ಸಾಧಕರಿಗೆ ಪದ್ಮಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಆರು ಜನರು ಪದ್ಮವಿಭೂಷಣ,ಒಂಬತ್ತು ಜನರು ಪದ್ಮಭೂಷಣ ಮತ್ತು 91 ಜನರು ಪದ್ಮಶ್ರೀ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.
ಪಶಸ್ತಿ ವಿಜೇತರ ಪಟ್ಟಿಯಲ್ಲಿ 19 ಮಹಿಳೆಯರಿದ್ದು, ಕರ್ನಾಟಕದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಮತ್ತು ಸಾಮಾಜಿಕ ಕಾರ್ಯಕರ್ತೆ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿಗಳು ಒಲಿದಿವೆ.
ಕರ್ನಾಟಕದ ಖಾದರ್ ವಲಿ ದುಡೆಕಳ,ರಾಣಿ ಮಾಚಯ್ಯ, ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ, ಶಾ ರಶೀದ್ ಅಹ್ಮದ್ ಖಾದ್ರಿ ಮತ್ತು ಎಸ್.ಸುಬ್ಬರಾಮನ್ ಅವರು ಪದ್ಮಶ್ರೀ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.